ಬ್ರೇಕಿಂಗ್ ನ್ಯೂಸ್
09-12-22 01:38 pm Source: Vijayakarnataka ಸಿನಿಮಾ
'ಗಾಡ್ ಆಫ್ ಮಾಸ್' ಎಂದೇ ಕರೆಸಿಕೊಳ್ಳುವ ತೆಲುಗು ನಟ ನಂದಮುರಿ ಬಾಲಕೃಷ್ಣ ( Nandamuri Balakrishna ) 108ನೇ ಸಿನಿಮಾ ಇಂದು ಅದ್ದೂರಿಯಾಗಿ ಸೆಟ್ಟೇರಿದೆ. ಬಾಲಕೃಷ್ಣ 108ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಇಬ್ಬರ ಕ್ರೇಜಿ ಕಾಂಬಿನೇಶನ್‌ನಲ್ಲಿ ಮೂಡಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರಕ್ಕೆ ಶೈನ್ ಸ್ಕ್ರೀನ್ಸ್ ಬ್ಯಾನರ್ ನಡಿ ಸಾಹು ಗರಪಟಿ ಮತ್ತು ಹರೀಶ್ ಪೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.
ಅದ್ದೂರಿಯಾಗಿ ನಡೆದ ಮುಹೂರ್ತ
NBK108ನೇ ಚಿತ್ರಕ್ಕೆ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದ್ದು, ನಿರ್ಮಾಪಕ ದಿಲ್ ರಾಜು ಕ್ಯಾಮೆರಾ ಚಾಲನೆ, ಲೆಜೆಂಡರಿ ನಿರ್ದೇಶಕ ಕೆ.ರಾಘವೇಂದ್ರ ರಾವ್ ಮುಹೂರ್ತ ಸೀನ್‌ಗೆ ಆಕ್ಷನ್ ಕಟ್ ಹೇಳುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಪ್ಯಾನ್ ಇಂಡಿಯಾ ಸಿನಿಮಾ
ಬಾಲಕೃಷ್ಣ ಅಭಿನಯದ 108ನೇ ಸಿನಿಮಾ ಇದಾಗಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿ ಈ ಚಿತ್ರ ಮೂಡಿ ಬರ್ತಿದೆ. ಸದ್ಯದಲ್ಲೇ ಟೈಟಲ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ. ಇಂದಿನಿಂದಲೇ ಚಿತ್ರೀಕರಣ ಆರಂಭವಾಗಲಿದ್ದು, ಆಕ್ಷನ್ ಸೀನ್ ನೊಂದಿಗೆ ಚಿತ್ರೀಕರಣ ಆರಂಭವಾಗಲಿದೆ. ಆಕ್ಷನ್ ಸೀನ್ ಸೆರೆ ಹಿಡಿಯಲೆಂದೇ ರಾಜೀವನ್ ಅವರ ನೇತೃತ್ವದಲ್ಲಿ ದೊಡ್ಡ ಸೆಟ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ಖ್ಯಾತ ಸಾಹಸ ನಿರ್ದೇಶಕ ವಿ. ವೆಂಕಟ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಕನ್ನಡ ನಟಿ ಶ್ರೀಲೀಲಾ ನಾಯಕಿ
ಆಕ್ಷನ್ ಹಾಗೂ ಮಾಸ್ ಎಲಿಮೆಂಟ್ ಒಳಗೊಂಡ ಈ ಚಿತ್ರಕ್ಕೆ ಬಾಲಕೃಷ್ಣ ಅವರ ಮಾಸ್ ಇಮೇಜ್, ಸ್ಟಾರ್ ಡಂ ಎಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅನಿಲ್ ರವಿಪುಡಿ ಪವರ್ ಫುಲ್ ಕಥೆ ಹೆಣೆದಿದ್ದಾರೆ. ಈ ಚಿತ್ರದಲ್ಲಿ ಕನ್ನಡದ ನಟಿ ಶ್ರೀಲೀಲಾ ( Sreeleela ) ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಎಸ್. ತಮನ್ ಸಂಗೀತ ನಿರ್ದೇಶನವಿದೆ.
ದೊಡ್ಡ ತಾರಾಗಣ
ಬಾಲಕೃಷ್ಣ, ಅನಿಲ್ ರವಿಪುಡಿ, ಎಸ್. ತಮನ್ ಈ ಮೂರು ಕಾಂಬಿನೇಶನ್ ಒಂದಾಗಿರೋ ಈ ಚಿತ್ರದ ಮೇಲೆ ಬಾಲಯ್ಯ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿ.ರಾಮ್ ಪ್ರಸಾದ್ ಕ್ಯಾಮೆರಾ ನಿರ್ದೇಶನ, ತಮ್ಮಿ ರಾಜು ಸಂಕಲನ ಚಿತ್ರಕ್ಕಿದೆ. ಸದ್ಯದಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.
Nandamuri Balakrishna Nbk 108 Movie Heroine Sreeleela.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm