ಬ್ರೇಕಿಂಗ್ ನ್ಯೂಸ್
08-02-23 01:56 pm Source: news18 ಸಿನಿಮಾ
ಕ್ರಿಯೇಟಿವ್ ಡೈರೆಕ್ಟರ್ ಸುಕುಮಾರ್ ಅವರು ಪುಷ್ಪ ಚಿತ್ರದ ಮುಂದುವರಿದ ಭಾಗವಾಗಿ ಪುಷ್ಪ 2 ಸಿನಿಮಾ ಮಾಡುತ್ತಿದ್ದಾರೆ. ಮೊದಲ ಭಾಗವನ್ನು ಹಿಂದಿಕ್ಕುವಂತೆ ಎರಡನೇ ಭಾಗದ ಬಗ್ಗೆ ವಿಶೇಷ ಕಾಳಜಿ ವಹಿಸಿ ಶೂಟಿಂಗ್ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಆಗಾಗ ಬರುತ್ತಿರುವ ಅಪ್‌ಡೇಟ್‌ಗಳು ಬನ್ನಿ ಅಭಿಮಾನಿಗಳಲ್ಲಿ ಹುಮ್ಮಸ್ಸು ತುಂಬುತ್ತಿವೆ. ಪುಷ್ಪ ದಿ ರೈಸ್ ಮೊದಲ ಭಾಗದಲ್ಲಿ ಸದ್ದು ಮಾಡಿದ್ದ ಅಲ್ಲು ಅರ್ಜುನ್ ಈಗ ಪುಷ್ಪ ದಿ ರೂಲ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಚಿತ್ರದ ಶೂಟಿಂಗ್ ಹಂತ ಹಂತವಾಗಿ ಪೂರ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿದ ಸುಕುಮಾರ್, ಇದೀಗ ವೈಜಾಗ್ ಶೆಡ್ಯೂಲ್ ಅನ್ನು ಕೂಡ ಮುಗಿಸಿದ್ದಾರಂತೆ.



ಇತ್ತೀಚೆಗಷ್ಟೇ ಪುಷ್ಪ 2 ಚಿತ್ರದ ಶೂಟಿಂಗ್ ವೈಜಾಗ್‌ನಲ್ಲಿ ಆರಂಭವಾಗಿತ್ತು. ಈ ಶೆಡ್ಯೂಲ್ ನಲ್ಲಿ ಚಿತ್ರದ ಹಲವು ಪ್ರಮುಖ ದೃಶ್ಯಗಳ ಜೊತೆಗೆ ಇಂಟ್ರೊ ಸಾಂಗ್ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ಈ ಶೆಡ್ಯೂಲ್ ಮುಗಿಯುತ್ತಿದ್ದಂತೆ ಅಲ್ಲು ಅರ್ಜುನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ.
ವೈಜಾಗ್ ಬೀಚ್ ದಡಕ್ಕೆ ಬರುತ್ತಿದ್ದಂತೆ ಅಲೆಗಳನ್ನು ನೋಡುತ್ತಿರುವ ಚಿತ್ರವನ್ನು ಅಲ್ಲು ಅರ್ಜುನ್ ಶೇರ್ ಮಾಡಿದ್ದಾರೆ. ಸಮುದ್ರದ ದಡದಲ್ಲಿ ಪ್ರಕೃತಿಯ ಸೊಬಗನ್ನು ಸವಿಯುತ್ತಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ಅಲ್ಲು ಅರ್ಜುನ್ ಮಾಡಿರುವ ಕಮೆಂಟ್ ವೈರಲ್ ಆಗಿದೆ. ಅಲ್ಲು ಅರ್ಜುನ್ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ``ಧನ್ಯವಾದ ವೈಜಾಗ್'' ಎಂದು ಪೋಸ್ಟ್ ಅಪ್ಡೇಟ್ ಮಾಡಿದ್ದಾರೆ. ವಿಶಾಖಪಟ್ಟಣಂ ತುಂಬಾ ಸ್ಪೆಷಲ್ ಎಂದು ಹೇಳುವ ಲವ್ ಸಿಂಬಲ್ ಕೂಡ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ಹಂಚಿಕೊಂಡಿರುವ ಈ ಫೋಟೋಗಳು ವೈರಲ್ ಆಗುತ್ತಿವೆ.


ಪುಷ್ಪ 2 ರ ಮುಂದಿನ ಶೆಡ್ಯೂಲ್ ಹೈದರಾಬಾದ್ ನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಅಲ್ಲು ವೈಜಾಗ್ ನಿಂದ ಹೈದರಾಬಾದ್ಗೆ ಬರಲಿದ್ದಾರೆ. ಸದ್ಯಕ್ಕೆ ಪ್ಯಾನ್ ಇಂಡಿಯಾ ಇಮೇಜ್ ಎಂಜಾಯ್ ಮಾಡುತ್ತಿರುವ ಅಲ್ಲು ಅರ್ಜುನ್ಗೆ ಪ್ಯಾನ್ ವರ್ಲ್ಡ್ ಕ್ರೇಜ್ ಸಿಗುವಂತೆ ಮಾಡಲು ಸುಕುಮಾರ್ ಪ್ಲಾನ್ ಮಾಡಿದ್ದಾರೆ. ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್ ರೂಲ್ ಪಾರ್ಟ್ ಕಥೆ ಇರಲಿದೆ. ಮೊದಲ ಭಾಗದಲ್ಲಿ ಶ್ರೀವಲ್ಲಿಯಾಗಿ ಕಾಣಿಸಿಕೊಂಡು ಯುವ ಪ್ರೇಕ್ಷಕರ ಮನ ಗೆದ್ದಿದ್ದರು ನಟಿ ರಶ್ಮಿಕಾ ಮಂದಣ್ಣ.
ಪುಷ್ಪ ಚಿತ್ರದಲ್ಲಿ ದಾಕ್ಷಾಯಿಣಿಯಾಗಿ ಮಿಂಚಿದ್ದ ಆ್ಯಂಕರ್ ಅನಸೂಯ ಇನ್ನೂ ಸ್ಟ್ರಾಂಗ್ ಪಾತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಎನ್ನಲಾಗುತ್ತಿದೆ. ಅನಸೂಯಾ ಜೊತೆ ಐಟಂ ಸಾಂಗ್ ಕೂಡ ಪ್ಲಾನ್ ಮಾಡಿರುವುದು ಕುತೂಹಲ ಮೂಡಿಸಿದೆ.
pushpa 2 Team Completes Vizag Schedule Actor Allu Arjun Shares a Post.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm