ಬ್ರೇಕಿಂಗ್ ನ್ಯೂಸ್
14-03-23 01:21 pm Source: news18 ಸಿನಿಮಾ
ಪುನೀತ್ ರಾಜ್ಕುಮಾರ್ ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಯಶಸ್ವಿಯಾಗಿ ತೆರೆ ಮೇಲೆ ತಂದರು. ಜನರು ಕೂಡ ಅಷ್ಟೇ ಪ್ರೀತಿಯಿಂದ ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಮೆಚ್ಚಿಕೊಂಡ್ರು. ಕಳೆದ ವರ್ಷ ಅಕ್ಟೋಬರ್ 29ರಂದು ಗಂಧದ ಗುಡಿ ಸಿನಿಮಾ ತೆರೆ ಕಂಡಿತ್ತು. ಕಳೆದ ವರ್ಷ ಅಕ್ಟೋಬರ್ 29ಕ್ಕೆ ಪುನೀತ್ ನಿಧನರಾಗಿ 1 ವರ್ಷಗಳೇ ಕಳದು ಹೋಗಿದೆ. ಪುಣ್ಯ ಸ್ಮರಣೆಯ ಅಂಗವಾಗಿ ಗಂಧದ ಗುಡಿ ಸಿನಿಮಾವನ್ನು ರಿಲೀಸ್ ಮಾಡಲಾಯ್ತು.
ಸಿನಿಮಾ ಕೂಡ ಯಶಸ್ವಿ ಪ್ರದರ್ಶನ ಕಂಡಿತು. ಪುನೀತ್ ಕೊನೆಯ ಸಿನಿಮಾ ಎಂದು ಅಭಿಮಾನಿಗಳು ಅಷ್ಟೇ ಅಲ್ಲದೇ ಅನೇಕ ಗಣ್ಯರು, ರಾಜಕಾರಣಿಗಳು ಕೂಡ ಸಿನಿಮಾ ನೋಡಿದ್ರ. ನಾಡು-ನುಡಿಯ ಬಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಇದ್ದ ಅಭಿಮಾನವನ್ನು ಕೊಂಡಾಡಿದ್ರು,. ಗಂಧದ ಗುಡಿ ಸಾಕ್ಷ್ಯಚಿತ್ರ ರಿಲೀಸ್ ಆಗಿ ಕೆಲ ತಿಂಗಳುಗಳೇ ಕಳೆದು ಹೋಗಿದೆ. ಇಷ್ಟು ದಿನವಾದ್ರೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಒಟಿಟಿಯಲ್ಲಿ ರಿಲೀಸ್ ಮಾಡುವ ಬಗ್ಗೆ ಘೋಷಣೆ ಮಾಡಿರಲಿಲ್ಲ.


ಯಾವಾಗ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ಬರುತ್ತೆ ಎಂದು ಅಭಿಮಾನಿಗಳು ಕಾಯ್ತಿದ್ರು. ಕೊನೆಗೂ ಕಾಲ ಕೂಡಿ ಬಂದಿದ್ದು, ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಇಂದು (ಮಾರ್ಚ್ 14) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ತಮ್ಮ ಹುಟ್ಟುಹಬ್ಬದ ದಿನ ಅಪ್ಪು ಗಂಧದ ಗುಡಿ ಸಿನಿಮಾದ ಒಟಿಟಿ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಪಿಆರ್ಕೆ ಪ್ರೊಡೆಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


ಮಾರ್ಚ್ 17ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಗಂಧದ ಗುಡಿ ರಿಲೀಸ್ ಆಗಲಿದೆ. ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನ ಅಭಿಮಾನಿಗಳು ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. ಥಿಯೇಟರ್ನಲ್ಲಿ ಪುನೀತ್ ಕೊನೆಯ ಸಿನಿಮಾ ಗಂಧದ ಗುಡಿಯನ್ನು ಮಿಸ್ ಮಾಡಿಕೊಂಡವರು ಇದೀಗ ಒಟಿಟಿಯಲ್ಲಿ ನೋಡಿ ಖುಷಿ ಪಡಬಹುದಾಗಿದೆ. ಮಾರ್ಚ್ 17ರಂದು ಪವರ್ ಸ್ಟಾರ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಕೂಡ ಕಾಯ್ತಿದ್ದಾರೆ.
Puneeth Rajkumar birthday is on march 17 Gandhad Gudi movie release in ott.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm