ಬ್ರೇಕಿಂಗ್ ನ್ಯೂಸ್
25-04-23 12:32 pm Source: news18 ಸಿನಿಮಾ
ರಾಜ್ಯದಲ್ಲಿ ಚುನಾವಣಾ ಪ್ರಚಾರದ ಕಾವು ಹೆಚ್ಚಾಗಿದೆ. ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು ಸ್ಟಾರ್ ರಂಗು ಕೂಡಾ ಸೇರಿಕೊಂಡಿದೆ. ಕಿಚ್ಚ ನಂತರ ಈಗ ಮತ್ತೊಬ್ಬ ಕನ್ನಡದ ನಟ ಪ್ರಚಾರಕ್ಕೆ ರೆಡಿಯಾಗಿದ್ದಾರೆ. ಅದು ಇನ್ಯಾರೂ ಅಲ್ಲ. ನಟ ಧ್ರುವ ಸರ್ಜಾ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಸಿನಿಮಾಗಳ ಶೂಟಿಂಗ್ ಮಧ್ಯೆಯೇ ವಿಧಾನಸಭಾ ಚುನಾವಣೆಯಲ್ಲಿ ಕೂಡಾ ಬ್ಯುಸಿಯಾಗುತ್ತಿದ್ದಾರೆ.


ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚುನಾವಣ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದು, ಇದೇ ತಿಂಗಳ 28 ರಿಂದ ಸ್ನೇಹಿತರ ಪರ ಮತಬೇಟೆ ಮಾಡಲಿದ್ದಾರೆ. ಪ್ರಚಾರ ಮಾಡಿ ಮತ ಯಾಚಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾರಕರ್, ಅರಕಲಗೂಡು ಬಿಜೆಪಿ ಅಭ್ಯರ್ಥಿ ಪರ ಹಾಗೂ ತುಮಕೂರು ಬಿಜೆಪಿ ಅಭ್ಯರ್ಥಿ ಪರ ಧ್ರುವ ಸರ್ಜಾ ಅವರು ಪ್ರಚಾರ ಮಾಡಲಿದ್ದಾರೆ. ಈ ಮೂಲಕ ಬಿಜೆಪಿ ಪರ ಪ್ರಚಾರಕ್ಕೆ ಮತ್ತೊಬ್ಬ ಸ್ಟಾರ್ ಬೆಂಬಲ ಸಿಕ್ಕಿದೆ. ಇದಲ್ಲದೆ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಪರ ಹಾಗೂ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿ ಪರ ಧ್ರುವ ಪ್ರಚಾರ ಮಾಡುವ ಸಾಧ್ಯತೆ ಇದೆ. ರಾಮನಗರದಲ್ಲಿ ಪ್ರಚಾರಕ್ಕೆ ಬರುವಂತೆ ಧ್ರುವ ಜೊತೆ ನಿಖಿಲ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.


ಈ ಹಿಂದೆ ಸಿಎಂ ಬೊಮ್ಮಾಯಿ ಜೊತೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸುದೀಪ್, ನಾನು ಪಕ್ಷ ಸೇರ್ಪಡೆಯಾಗಿಲ್ಲ. ಆದ್ರೆ ಬಸವರಾಜ್ ಬೊಮ್ಮಾಯಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಷ್ಟದ ದಿನಗಳಲ್ಲಿ ನನ್ನ ಜೊತೆಗಿದ್ದವರಲ್ಲಿ ಬೊಮ್ಮಾಯಿ ಮಾಮ ಕೂಡಾ ಒಬ್ಬರು. ಹೀಗಾಗಿ ಅವರಿಗೆ ನಾನು ಬೆಂಬಲ ಕೊಡುತ್ತೇನೆ. ನನ್ನ ಅವಶ್ಯಕತೆ ಎಲ್ಲೆಲ್ಲಿ ಬೀಳುತ್ತೋ ಅಲ್ಲಿಲ್ಲಿ ನಾನು ಸಹಾಯ ಮಾಡುತ್ತೇನೆ. ನನ್ನ ಬೆಂಬಲ ಬೊಮ್ಮಾಯಿಗಷ್ಟೇ ಹೊರತು ಪಕ್ಷಕ್ಕಲ್ಲ ಎಂದಿದ್ದರು ಕಿಚ್ಚ.
dhruva sarja to campaign for bjp candidates here is the updates.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm