ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.

ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್‍ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm