ಬ್ರೇಕಿಂಗ್ ನ್ಯೂಸ್
12-07-23 02:10 pm Source: News18 Kannada ಸಿನಿಮಾ
ಚೆನ್ನೈನ ಅಕ್ಕರೈ ಜಂಕ್ಷನ್ನಲ್ಲಿ ನಟ ವಿಜಯ್ ಅವರ ಕಾರು ರೆಡ್ ಸಿಗ್ನಲ್ ಜಂಪ್ ಮಾಡಿದೆ. ನಟನ ಕಾರಿ ಡ್ರೈವರ್ ರೂಲ್ಸ್ ಬ್ರೇಕ್ ಮಾಡಿದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆ ಗಮನಕ್ಕೂ ಬಂದಿದೆ. ವಿಡಿಯೋ ನೋಡಿದ ಚೆನ್ನೈ ಸಂಚಾರ ಪೊಲೀಸರು ವಿಜಯ್ ಕಾರಿಗೆ 500 ರೂ. ದಂಡ ಹಾಕಿದ್ದಾರೆ. ನಿನ್ನೆ ಚೆನ್ನೈನ ಪನೈಯೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಗೆ ವಿಜಯ್ ತೆರಳಿದ್ರು. ಕಾರ್ಯಕ್ರಮಕ್ಕೆ ಹೋಗುವಾಗ ನಟ ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ್ದಾರೆ.
ಕಳೆದ ವರ್ಷ ವಿಜಯ್ ಅವರ ಅದೇ ವಾಹನಕ್ಕೆ ನಿಯಮ ಉಲ್ಲಂಘಿಸಿ ಕಪ್ಪು ಸ್ಟಿಕ್ಕರ್ ಅಂಟಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದರು. ಇದೀಗ ಮತ್ತೆ ದಂಡ ವಿಧಿಸಿಲಾಗಿದೆ. ನಟನೆಯ ಜೊತೆಗೆ ರಾಜಕೀಯದತ್ತ ಮನಸ್ಸು ಮಾಡಿರುವ ನಟ ವಿಜಯ್, ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಯ ಮಾಡಲು ಮುಂದಾಗಿದ್ದಾರೆ. ತಮ್ಮ ಜನಾಂದೋಲನ ಕಾರ್ಯಕಾರಿಣಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.


ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸಿನಿಮಾ ನಟನೆಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆ ಎಂದು ತಮಿಳಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿಜಯ್ ರಾಜಕೀಯ ಪ್ರವೇಶದ ಚರ್ಚೆಗಳು ಜೋರಾಗಿದ್ದು, ನಟ ನಟನೆಯಿಂದ ವಿರಾಮ ತೆಗೆದುಕೊಂಡು ರಾಜಕೀಯದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲು ವಿಜಯ್ ಕಾರ್ಯಕ್ರಮ ಆಯೋಜಿಸಿದ್ರು. ವಿಜಯ್ ಅಭಿಮಾನಿ ಸಂಘಟನೆಯಾದ ಮಕ್ಕಳ್ ಇಯಕ್ಕಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜಯ್ ರಾಜಕೀಯ ಪ್ರವೇಶದ ಸುಳಿವು ನೀಡಿದರು.

ಹಣ ಪಡೆದು ಮತದಾನ ಮಾಡದಂತೆ ಪೋಷಕರಿಗೆ ಸಲಹೆ ನೀಡಬೇಕು ಎಂದು ಮಕ್ಕಳಿಗೆ ತಿಳಿಸಿದ ವಿಜಯ್, ವಿದ್ಯಾರ್ಥಿಗಳನ್ನು ಭವಿಷ್ಯದ ಮತದಾರರು ಎಂದು ಬಣ್ಣಿಸಿದರು. ತಮ್ಮ ಸಿನಿಮಾಗಳ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಹಲವು ಬಾರಿ ಮಾತನಾಡಿರುವ ವಿಜಯ್ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಮಾತಾಡಿದ್ದರು.
ವಿಜಯ್ ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಮಾತುಗಳು ವೈರಲ್ ಆಗಿದೆ. ತಮಿಳು ನಾಡಿನ ರಾಜಕೀಯದಲ್ಲಿ ವಿಜಯ್ ಶೈನ್ ಆಗಲು ತಯಾರಾಗಿದ್ದಾರೆ.
Cinema Car Violated Signal Actor Vijay Fined by Traffic Police.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm