ಬ್ರೇಕಿಂಗ್ ನ್ಯೂಸ್
09-09-23 02:35 pm HK News Desk ಸಿನಿಮಾ
ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ನಟನೆಯ 'ಜವಾನ್' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಅಟ್ಲೀ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಸಿಕ್ಕಿದೆ. ಸೆಪ್ಟಂಬರ್ 7ರಂದು ತೆರೆಕಂಡ ಚಿತ್ರ ಮೊದಲ ದಿನದ ಗಳಿಕೆಯಲ್ಲೇ ಹೊಸ ದಾಖಲೆಯನ್ನು ಬರೆದಿದೆ. ಶಾರುಖ್ ಹೊರತುಪಡಿಸಿ, ನಯನತಾರಾ, ವಿಜಯ್ ಸೇತುಪತಿ ಅವರಿಗೂ 'ಜವಾನ್' ಉತ್ತಮ ಹೆಸರು ತಂದುಕೊಟ್ಟಿದೆ. ಎರಡು ದಿನದ ಕಲೆಕ್ಷನ್ನೊಂದಿಗೆ ಸಿನಿಮಾವು ಭಾರತದಲ್ಲಿ 100 ಕೋಟಿ ರೂ. ಗಡಿ ದಾಟಿದೆ.
ಜವಾನ್' ಕಲೆಕ್ಷನ್': 'ಜವಾನ್' ಸಿನಿಮಾ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದೆ. ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾದ ಚಿತ್ರ ಫಸ್ಟ್ ಡೇ 74.5 ಕೋಟಿ ರೂಪಾಯಿಗೂ ಹೆಚ್ಚು ಸಂಪಾದಿಸಿದೆ. ಸಿನಿಮಾವು ಹಿಂದಿ ಭಾಷೆಯಲ್ಲಿ 65.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದರೆ, ಉಳಿದ ಮೊತ್ತವು ಸಿನಿಮಾದ ಆವೃತ್ತಿಯಿಂದ ಬಂದಿದೆ. ವಿಶ್ವದಾದ್ಯಂತ ಮೊದಲ ದಿನವೇ ಚಿತ್ರವು 100 ಕೋಟಿ ಕ್ಲಬ್ ಸೇರಿದೆ. ಚಿತ್ರ ಸುಮಾರು 129.6 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ.
ಸ್ಯಾಕ್ನಿಲ್ ಅಂದಾಜು ವರದಿಯ ಪ್ರಕಾರ, ಜವಾನ್ ಆರಂಭಿಕ ದಿನಕ್ಕಿಂತ ಎರಡನೇ ದಿನ ಕಡಿಮೆ ಗಳಿಸಿದೆ. ಚಿತ್ರವು ಸೆಕೆಂಡ್ ಡೇ ಒಟ್ಟು 50.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಅಂದಾಜು ಸರಿಯಾದಲ್ಲಿ ಚಿತ್ರ ಒಟ್ಟು ಭಾರತದ ಬಾಕ್ಸ್ ಆಫೀಸ್ನಲ್ಲಿ 125 ಕೋಟಿ ರೂಪಾಯಿ ಸಂಗ್ರಹಿಸಿದೆ. ವಿಶ್ವದಾದ್ಯಂತ ನೋಡುವುದಾದರೆ, ಚಿತ್ರವು 200 ಕೋಟಿ ರೂಪಾಯಿಗಳನ್ನು ದಾಟಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇಂದು ಮತ್ತು ನಾಳೆ ಕಲೆಕ್ಷನ್ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಮೂರನೇ ದಿನದ ಕಲೆಕ್ಷನ್?: ವಾರಾಂತ್ಯವಾದ ಇಂದು ಮತ್ತು ನಾಳೆ ಥಿಯೇಟರ್ಗಳಲ್ಲಿ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗಲಿದೆ. ಚಿತ್ರವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, 200 ಕೋಟಿಯತ್ತ ಸಾಗುತ್ತಿದೆ. ಮೊದಲ ವಾರಾಂತ್ಯದಲ್ಲಿ ವಿಶ್ವದಾದ್ಯಂತ ಜವಾನ್ 250 ಕೋಟಿಗೂ ಹೆಚ್ಚು ಬ್ಯುಸಿನೆಸ್ ಮಾಡಲಿದೆ. ಶನಿವಾರವಾದ ಇಂದು ಚಿತ್ರವು ಗಲ್ಲಾಪೆಟ್ಟಿಗೆ ತುಂಬಿಸಲಿದೆ. ಇಂದು ವಿಶ್ವದಾದ್ಯಂತ ಗಳಿಕೆಯೂ 200 ಕೋಟಿ ರೂಪಾಯಿಗಳನ್ನು ದಾಟಲಿದೆ. ಸ್ಯಾಕ್ನಿಲ್ ಪ್ರಕಾರ, ಚಿತ್ರವು ಮೂರನೇ ದಿನಕ್ಕೆ ಭಾರತದಲ್ಲಿ 70 ಕೋಟಿ ಗಳಿಸಲಿದೆ. ಈ ಮೂಲಕ ವಿಶ್ವದಾದ್ಯಂತ ಚಿತ್ರದ ಕಲೆಕ್ಷನ್ 200 ಕೋಟಿ ದಾಟಲಿದೆ.
'ಜವಾನ್' ಸಿನಿಮಾವನ್ನು ತಮಿಳು ನಿರ್ದೇಶಕ ಅಟ್ಲಿ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್ ಅಲ್ಲದೇ, ದಕ್ಷಿಣ ಭಾರತದ ಪ್ರಮುಖ ನಟ ನಟಿಯರಾಗಿರುವ ನಯನತಾರ, ವಿಜಯ್ ಸೇತುಪತಿ ಇದೇ ಮೊದಲ ಬಾರಿಗೆ ಬಾಲಿವುಡ್ನಲ್ಲಿ ಮಿಂಚು ಹರಿಸಿದ್ದಾರೆ. ಇದರ ಜೊತೆಗೆ ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ, ರಿದ್ದಿ ಡೊಗ್ರಾ ಕೂಡ ಬಣ್ಣ ಹಚ್ಚಿದ್ದಾರೆ. ಗೌರವ ಪಾತ್ರದಲ್ಲಿ ದೀಪಿಕಾ ಪಡುಕೋಣೆ, ಸಂಜಯ್ ದತ್ ನಟನೆ ಚಿತ್ರದ ಮತ್ತೊಂದು ಹೈಲೈಟ್ ಆಗಿದೆ.
After earth-shattering success of Pathaan, Shah Rukh Khan returned to the big screen with Atlee's Jawan. The film stars Nayanthara as the female lead and Vijay Sethupathi as the antagonist and released on September 7. On its opening day, Jawan emerged to be the biggest opener of all time in Hindi cinema, and seemingly, the Jawan fever is not going to rest anytime soon.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm