ಬ್ರೇಕಿಂಗ್ ನ್ಯೂಸ್
09-12-20 12:01 pm Headline Karnataka News Network ಸಿನಿಮಾ
ಬೆಂಗಳೂರು, ಡಿ.9: ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಬಿಗ್ ಬಾಸ್ ಕೊರೋನಾ ಎಫೆಕ್ಟ್ ನಿಂದ ವಿಳಂಬವಾಗಿದ್ದು ಸಂಕ್ರಾಂತಿ ಬಳಿಕ ಮತ್ತೆ ಒಂಟಿ ಮನೆ ಆಟ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ. ಹೌದು, ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಈ ಬಾರಿ ನಡೆಯುತ್ತೋ ಇಲ್ಲವೋ ಎಂಬ ಗೊಂದಲದಲ್ಲಿತ್ತು. ಮಹಾಮಾರಿ ಕೊರೋನಾ ಆ ರೀತಿ ಸ್ಥಿತಿಯನ್ನು ನಿರ್ಮಾಣ ಮಾಡಿತ್ತು. ಆದರೆ ಈ ಎಲ್ಲ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈಗಾಗಲೇ ಕಲರ್ಸ್ ಕನ್ನಡದ ಬಿಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಬಿಗ್ ಬಾಸ್ ಸೀಸನ್ 8 ತಯಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಅಕ್ಟೋಬರ ಮಧ್ಯಭಾಗದಲ್ಲಿ ಆರಂಭವಾಗಬೇಕಿದ್ದ ಶೋ ಜನವರಿ ಮಧ್ಯಭಾಗದಲ್ಲಿ ಶುರುವಾಗಲಿದೆ.
ಈಗಾಗಲೇ ಬಿಗ್ ಬಾಸ್ ಸೀಸನ್ 8 ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ಕೂಡ ಸಿಕ್ಕಿದೆ ಎಂದು ಹೇಳಲಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಾರಿ ದೊಡ್ಡ ಮನೆಗೆ ಹೋಗುವವರ ಕೆಲವೊಂದು ಹೆಸರು ಬೇಜಾನ್ ಹರಿದಾಡುತ್ತಿದೆ.ಇತ್ತ ಬೆಂಗಳೂರಿನ ಬಿಡದಿ ಬಳಿಯ ಇನ್ನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಬಿಗ್ ಬಾಸ್ ಮನೆಯನ್ನು ಹೊಸದಾಗಿ ಕಟ್ಟಲಾಗುತ್ತಿದ್ದು ಬಹುತೇಕ ಎಲ್ಲ ಕಾರ್ಯಗಳು ಪೂರ್ಣಗೊಂಡಿವೆಯಂತೆ. ಅಲ್ಲದೆ ಈ ಬಾರಿ ವಿಶೇಷವಾಗಿ ಮನೆಯನ್ನು ಸಿದ್ಧಗೊಳಿಸಲಾಗುತ್ತಿದೆ.
ಜೊತೆಗೆ ಕ್ಯಾಮರಾಗಳನ್ನು ಫಿಕ್ಸ್ ಮಾಡುವ ಕೆಲಸವೂ ಆರಂಭಗೊಳ್ಳುತ್ತಿದೆ. ಮನೆಯೊಳಗೆ ಕೆಲವು ತಾಂತ್ರಿಕ ಕೆಲಸಗಳನ್ನು ಮಾಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ಹೊತ್ತಿಗೆ ಎಲ್ಲ ಕೆಲಸ ಪೂರ್ಣಗೊಂಡು ಬಿಗ್ ಬಾಸ್ ಮನೆ ಸಂಪೂರ್ಣ ಸಜ್ಜಾಗಲಿದೆ.
ಬಿಗ್ ಬಾಸ್ ಸೀಸನ್ 8ರಲ್ಲಿ ಸೆಲೆಬ್ರಿಟಿಗಳು ಮಾತ್ರ ಇರ್ತಾರಾ ಅಥವಾ ಕಾಮನ್ ವ್ಯಕ್ತಿಗಳೂ ಇರ್ತಾರಾ, ಗೊತ್ತಿಲ್ಲ. ಆದರೆ, ಕೆಲವೊಂದು ಪರಿಚಿತ ಮುಖಗಳನ್ನೂ ನೋಡಬಹುದು.
ಪ್ರಮುಖವಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟ ಆರ್ಯವರ್ಧನ್, ನ್ಯೂಸ್ ರೀಡರ್ ರಾಧಾ ಹಿರೇಗೌಡರ್, ದಿವ್ಯಾ, ಡ್ರೋನ್ ಪ್ರತಾಪ್, ಟಿಕ್ ಟಾಕ್ ಚೆಲುವೆ ಸೋನು ಗೌಡ, ಬಿಂದು ಗೌಡ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಹೆಸರು ಮಾಡಿದವರ ಅನೇಕ ಹೆಸರು ಕೇಳಿಬರುತ್ತಿವೆ. ಆದರೆ, ಇದು ಎಷ್ಟರ ಮಟ್ಟಿಗೆ ನಿಜ ಎಂಬುದು ತಿಳಿದಿಲ್ಲ.
ಈಗಾಗಲೇ ಬಿಗ್ ಬಾಸ್ ತೆಲುಗು, ತಮಿಳು, ಹಿಂದಿ ಬಿಗ್ ಬಾಸ್ ಶೋಗಳು ಆರಂಭಗೊಂಡಿದ್ದು, ಪ್ರೇಕ್ಷಕರನ್ನು ಮನರಂಜಿಸುತ್ತಿದೆ. ಕೊರೋನಾ ಮಧ್ಯೆ ಸರಿಯಾದ ಕ್ರಮಗಳನ್ನು ಕೈಗೊಂಡು ಮತ್ತು ಸುರಕ್ಷಿತವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಮೊನ್ನೆಯಷ್ಟೆ ಕಿಚ್ಚ ಸುದೀಪ್ ತೆಲುಗು ಬಿಗ್ ಬಾಸ್ಗೆ ಎಂಟ್ರಿ ಕೊಟ್ಟು ಸಂಚಲನ ಸೃಷ್ಟಿಸಿದ್ದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm