ಬ್ರೇಕಿಂಗ್ ನ್ಯೂಸ್
10-12-20 11:46 am Source: FILMIBEAT Shruthi Gk ಸಿನಿಮಾ
ತಮಿಳುನಾಡು, ಡಿ.10: ತಮಿಳು ಕಿರುತೆರೆ ಲೋಕದ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಬಳಿಕ ಗುಟ್ಟಾಗಿ ಮದುವೆಯಾಗಿದ್ದ ವಿಚಾರ ಸದ್ದು ಮಾಡುತ್ತಿದೆ. ಚೈತ್ರಾ ಉದ್ಯಮಿ ಹೇಮಂತ್ ಕುಮಾರ್ ಜೊತೆ ರಹಸ್ಯವಾಗಿ ಮದುವೆಯಾಗಿದ್ದರು ಎನ್ನುವ ವಿಚಾರ ತನಿಖೆ ವೇಳೆ ಬಹಿರಂಗವಾಗಿದೆ. 28 ವರ್ಷದ ಚಿತ್ರಾ ಚೆನ್ನೈನ ನಜರೆತ್ ಪೆಟ್ಟೈನ ಪಂಚತಾರಾ ಹೋಟೆಲ್ ನಲ್ಲಿ ನಿನ್ನೆ (ಡಿ.09) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೈತ್ರಾ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ಅನುಮಾವ ಸಹ ವ್ಯಕ್ತವಾಗಿದ್ದು, ಚಿತ್ರಾ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಳ್ಳುವಂತವಳಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆಯಲ್ಲಿ ಚಿತ್ರಾ ಮದುವೆ ಆಗಿದ್ದರು ಎನ್ನುವ ವಿಚಾರ ಬಹಿರಂಗವಾಗಿದೆ.

ಗುಟ್ಟಾಗಿ ಮದುವೆ ಆಗಿದ್ದ ಚಿತ್ರಾ
ಆಗಸ್ಟ್ ತಿಂಗಳಲ್ಲಿ ನಟಿ ಚಿತ್ರಾ ಉದ್ಯಮಿ ಹೇಮಂತ್ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ ಇಬ್ಬರು ಒಟ್ಟಿಗೆ ಹೋಟೆಲ್ ನಲ್ಲೇ ವಾಸಿಸುತ್ತಿದ್ದರು. ನಿಶ್ಚಿತಾರ್ಥದ ವಿಚಾರ ಎಲ್ಲರಿಗೂ ಗೊತ್ತಿತ್ತು. ಆದರೀಗ ಪೊಲೀಸ್ ತನಿಖೆ ವೇಳೆ ಇಬ್ಬರು ಗುಟ್ಟಾಗಿ ಮದುವೆ ಕೂಡ ಆಗಿದ್ದರು ಎನ್ನುವ ವಿಚಾರ ಬಯಲಾಗಿದೆ ಅಕ್ಟೋಬರ್ 9ರಂದು ಮದುವೆ ಅಕ್ಟೋಬರ್ 9ರಂದು ಇಬ್ಬರು ಮದುವೆಯಾಗಿದ್ದಾರಂತೆ. ಗುಟ್ಟಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ ವಿಚಾರವನ್ನು ಅವರು ಎಲ್ಲಿಯೂ ಬಹಿರಂಗ ಪಡಿಸಲಿಲ್ಲ. ಈ ಬಗ್ಗೆ ಹೇಮಂತ್ ಪೊಲೀಸರಿಗೆ ಮಾಹಿತಿ ನೀಡಿದ್ದು, ರಿಜಿಸ್ಟರ್ ಮ್ಯಾರೇಜ್ ಆಗಿರುವುದಾಗಿ ಹೇಳಿ ಸಾಕ್ಷಿ ಸಹ ನೀಡಿದ್ದಾರಂತೆ.

ಹೇಮಂತ್ ಕುಮಾರ್ ಪ್ರತಿಕ್ರಿಯೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾವಿ ಪತಿ ಹೇಮಂತ್, 'ಚಿತ್ರೀಕರಣ ಮುಗಿಸಿ ವಾಪಸ್ ಆಗಿದ್ದ ಚಿತ್ರಾ ಸ್ನಾನ ಮುಗಿಸಿ ಬರುವುದಾಗಿ ಹೇಳಿ ಹೋದಳು. ತುಂಬಾ ಸಮಯವಾದರೂ ಬರಲಿಲ್ಲ, ಬಳಿಕ ಬಾಗಿಲು ಬಡಿಯಲು ಪ್ರಾರಂಭಿಸಿದೆ. ಬಾಗಿಲು ತೆಗೆಯಲಿಲ್ಲ. ಬಳಿಕ ಹೋಟೆಲ್ ಸಿಬ್ಬಂದಿಗೆ ತಿಳಿಸಿ ನಕಲಿ ಕೀ ಬಳಸಿ ಬಾಗಿಲು ತೆರೆದೆವು. ಚಿತ್ರಾ ನೇಣುಹಾಕಿಕೊಂಡಿದ್ದಳು' ಎಂದಿದ್ದಾರೆ.

ನಟಿ ಮತ್ತು ನಿರೂಪಕಿಯಾಗಿ ಖ್ಯಾತಿಗಳಿಸಿರುವ ಚಿತ್ರಾ
ಚಿತ್ರಾ ಹಠಾತ್ ಅಗಲಿಕೆ ಅಭಿಮಾನಿಗಳು, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ಆಘಾತ ವುಂಟಾಗಿದೆ. ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ. ಚಿತ್ರಾ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸುವ ಜೊತೆೆಗೆ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿದ್ದ ಚಿತ್ರಾ ಸಾಯುವ ಮುನ್ನ ದಿನ ಸುಂದರ ಫೋಟೋವನ್ನು ಹಂಚಿಕೊಂಡಿದ್ದರು.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm