ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.
4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
04-09-25 07:57 pm
Mangalore Correspondent
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm