ಬ್ರೇಕಿಂಗ್ ನ್ಯೂಸ್
18-12-20 02:52 pm Source: FILMIBEAT ಸಿನಿಮಾ
ಸ್ಯಾಂಡಲ್ವುಡ್ನ ರಾಕಿಂಗ್ ಜೋಡಿ ಯಶ್-ರಾಧಿಕಾ ಮತ್ತೆ ಕಿರುತೆರೆಯಲ್ಲಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಈ ಹಿಂದೆ 'ನಂದಗೋಕುಲ' ಎಂಬ ಧಾರಾವಾಹಿಯಲ್ಲಿ ನಟಿಸಿ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದರು ಈ ಜೋಡಿ. ಈಗ ಹಲವು ವರ್ಷಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಒಂದಾಗಿದ್ದಾರೆ. ಅದು ಜಾಹೀರಾತು ಒಂದಕ್ಕೆ. ಇದೇ ಮೊದಲ ಬಾರಿ ಇಬ್ಬರು ಜಾಹೀರಾತಿನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರ ಜೋಡಿ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರ ಮನಗೆಲ್ಲುವುದು ಸುಳ್ಳಲ್ಲ.
ಈ ಮೂಲಕ ಮತ್ತೊಮ್ಮೆ ಕನ್ನಡಿಗರ ಮನಗೆಲ್ಲಲು ಈ ಜೋಡಿ ಸಿದ್ದವಾಗಿದ್ದಾರೆ. ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲಿ ಕೆಲಕಾಲ ಅಂತರ ಕಾಯ್ದುಕೊಂಡಿರುವ ನಟಿ ರಾಧಿಕಾ ಪಂಡಿತ್, ಯಶ್ ಜೊತೆ ಮತ್ತೆ ತೆರೆ ಮೇಲೆ ಕಾಣಿಸುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಸದ್ಯ ನಟ ಯಶ್ ಕೆಜಿಎಫ್ -2 ಸಿನಿಮಾದ ಕೊನೆ ಹಂತದ ಚಿತ್ರೀಕರಣದಲ್ಲಿ ತಲ್ಲೀನರಾಗಿದ್ದಾರೆ. ಇತ್ತ ಮಗನ ಮೊದಲ ಹಾಗೂ ಮಗಳ ಎರಡನೇ ಹುಟ್ಟು ಹಬ್ಬ ಆಚರಿಸಿರುವ ನಟಿ ರಾಧಿಕಾ ಈ ಜಾಹೀರಾತಿನ ಮೂಲಕ ಮತ್ತೆ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲು ಸಿದ್ಧರಾಗಿದ್ದಾರೆ.

ಇನ್ನು ಈ ಕುರಿತು ಸಂತಸ ಹಂಚಿಕೊಂಡಿರುವ ನಟಿ ರಾಧಿಕಾ, ನಾಲ್ಕು ವರ್ಷದ ಬಳಿಕ ತನ್ನ ಸಹ ನಟನೊಂದಿಗೆ ಕಾರ್ಯ ಆರಂಭಿಸಿರುವುದು ಖುಷಿ ಮೂಡಿಸಿದೆ ಎಂದು ತಿಳಿಸಿದ್ದಾರೆ. ಮದುವೆಗೂ ಮೊದಲು ಇವರಿಬ್ಬರು 'ಮಿಸ್ಟರ್ ಅಂಡ್ ಮಿಸ್ಸೆಸ್ ರಾಮಚಾರಿ', 'ಸಂಜು ಸ್ಟ್ರೈಟ್ ಫಾರ್ವಡ್' ನಲ್ಲಿ ನಟಿಸಿದ್ದರು.
ಈಗಾಗಲೇ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಈ ಜೋಡಿ ಈಗ ಜಾಹೀರಾತಿನ ಮೂಲಕ ಇನ್ನಷ್ಟು ಅಭಿಮಾನಿಗಳಿಗೆ ಆತ್ಮೀಯವಾಗುವ ಪ್ರಯತ್ನ ನಡೆಸಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm