ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm