ಬ್ರೇಕಿಂಗ್ ನ್ಯೂಸ್
26-12-20 02:20 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.26: ಡ್ರಗ್ಸ್ ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾನಿ ಇಂದು ಸಿಸಿಬಿ ಪೊಲೀಸರ ಮುಂದೆ ಹಾಜರಾದರು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿ, ಕೆಲವು ದಿನಗಳ ಹಿಂದಷ್ಟೆ ಆರೋಗ್ಯ ಕಾರಣ ನೀಡಿ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ. ಜಾಮೀನು ನೀಡಿದ್ದ ನ್ಯಾಯಾಲಯವು, ಸಂಜನಾ ಗೆ ಕೆಲವು ಷರತ್ತುಗಳನ್ನು ವಿಧಿಸಿತ್ತು, ಜಾಮೀನು ಅವಧಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಸಹ ಷರತ್ತು ವಿಧಿಸಲಾಗಿತ್ತು. ಆ ಷರತ್ತಿನ ಅನ್ವಯ ಇಂದು ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.

ಸೆಪ್ಟೆಂಬರ್ 8 ರಂದು ನಟಿ ಸಂಜನಾ ಗಲ್ರಾನಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀರು ಬಂಧಿಸಿದ್ದರು. ಅವರನ್ನು ಪರಪ್ಪರ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಡಿಸೆಂಬರ್ 11 ರಂದು ಕರ್ನಾಟಕ ರಾಜ್ಯ ಹೈಕೋರ್ಟ್ ಸಂಜನಾ ಗೆ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತುಗಳನ್ನು ಸಹ ಸಂಜನಾ ಗೆ ವಿಧಿಸಲಾಗಿದೆ. ಮೂರು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಇಬ್ಬರ ಶ್ಯೂರಿಟಿ ನೀಡುವುದರ ಜೊತೆಗೆ. ಪ್ರತಿ ತಿಂಗಳು ಎರಡು ಬಾರಿ ಪೊಲೀಸ್ ಠಾಣೆಗೆ ಹಾಜರಾಗಬೇಕು ಹಾಗೂ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಕಾರ್ಯ ಮಾಡದೆ ವಿಚಾರಣೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ಸಂಜನಾಗೆ ಜಾಮೀನು ಮಂಜೂರು ಮಾಡಲಾಗಿದೆ.
ಸಂಜನಾ ಗಲ್ರಾನಿಗಿಂತಲೂ ಮೊದಲು ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿಗೆ ಈ ವರೆಗೆ ಜಾಮೀನು ದೊರೆತಿಲ್ಲ. ರಾಗಿಣಿ ಗೆ ಇತ್ತೀಚೆಗೆ ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm