ಬ್ರೇಕಿಂಗ್ ನ್ಯೂಸ್
23-09-25 08:57 pm Bangalore Correspondent ಸಿನಿಮಾ
ಬೆಂಗಳೂರು, ಸೆ.23 : ಪಂಚವಾರ್ಷಿಕ ಯೋಜನೆಯ ತರಹ ಕಾಂತಾರ ಚಿತ್ರವನ್ನು ಐದು ವರ್ಷದ ದೊಡ್ಡ ಜರ್ನಿ ಎನ್ನಬಹುದು. ತುಂಬಾ ಕಷ್ಟಗಳನ್ನು ದಾಟಿ ರಿಲೀಸ್ ಹಂತಕ್ಕೆ ಬಂದಿದೆ. ಈ ಹಂತದಲ್ಲಿ ನನ್ನ ಮಡದಿ ಪ್ರಗತಿ ಎಷ್ಟು ದೇವರಿಗೆ ಹರಕೆ ಹೊತ್ತಿದ್ದಾಳೆ ಗೊತ್ತಿಲ್ಲ. ಇದು ಎಮೋಷನಲ್ ಜರ್ನಿ ಕೂಡ ಹೌದು. ನನ್ನ ಈ ಪ್ರಯತ್ನಕ್ಕೆ ಇಡೀ ತಂಡ ಶಕ್ತಿಯಾಗಿ ನಿಂತಿದೆ. ಹೀಗೆಂದು ಕಾಂತಾರ-೧ ಚಿತ್ರದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಟ್ರೈಲರ್ ರಿಲೀಸ್ ಹಿನ್ನೆಲೆಯಲ್ಲಿ ಚಿತ್ರದ ಪ್ರಿ ಇವೆಂಟ್ ಕಾರ್ಯಕ್ರಮ ನಡೆಯಿತು. ಅದರಲ್ಲಿ ರಿಷಬ್ ಮಾತನಾಡಿದ್ದಾರೆ.
ತುಂಬಾ ದೊಡ್ಡ ತಂಡವಿದು. ಫಾರೆಸ್ಟ್ ಮಿನಿಸ್ಟರ್ ನಿಂದ ಹಿಡಿದು ಊರಿನ ಜನರು ಸೇರಿದಂತೆ ಎಲ್ಲರೂ ನಮಗೆ ಸಪೋರ್ಟ್ ಮಾಡಿದ್ದಾರೆ. ತಂಡಕ್ಕೆ ಬೇಕಾಗಿದ್ದನ್ನು ಬಜೆಟ್ ಲೆಕ್ಕ ಹಾಕದೆ ನಿರ್ಮಾಪಕ ವಿಜಯ್ ಕಿರಗಂದೂರ್ ಕೊಟ್ಟಿದ್ದಾರೆ. ಮೂರು ತಿಂಗಳಿನಿಂದ ನಮ್ಮ ತಂಡ ನಿದ್ದೆ ಸರಿಯಾಗಿ ಮಾಡಿಲ್ಲ. ಅಷ್ಟು ಕೆಲಸ ಮಾಡುತ್ತಿದ್ದಾರೆ. ನಾಲ್ಕೈದು ಸಾರಿ ನಾನು ಸಾವಿನ ಬಾಗಿಲಿಗೆ ಹೋಗಿ ಬಂದಿದ್ದೇನೆ. ಆ ದೈವದ ಶಕ್ತಿ ನಮ್ಮ ಜೊತೆ ನಿಂತಿದೆ ಅನಿಸಿತು. ಈ ಚಿತ್ರಕ್ಕಾಗಿ ಸುಮಾರು ನಾಲ್ಕುವರೆ ಲಕ್ಷ ಜನರಿಗೆ ಊಟ ಹಾಕಿದ್ದಾರೆ ನಿರ್ಮಾಪಕರು.
'ಕಾಂತಾರ' ಶುರು ಮಾಡಿದಾಗ ಸಿನಿಮಾ ಆಗಿತ್ತು. ಹೋಗ್ತಾ ಹೋಗ್ತಾ ಭಾವನಾತ್ಮಕ ಪಯಣವಾಗಿದೆ. ನಮ್ಮ ಕನ್ನಡಿಗರು, ಮಾಧ್ಯಮಗಳು ಚಿತ್ರವನ್ನು ಇಷ್ಟು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಒಂದು ಲೈನ್ ಕಥೆಯಿಂದ ನನ್ನ ಮೇಲೆ ನಂಬಿಕೆ ಇಟ್ಟುಕೊಂಡು ನಿರ್ಮಾಪಕರು ಇಲ್ಲಿಯವರೆಗೂ ತಂದಿದ್ದಾರೆ'' ಎಂದರು ರಿಷಬ್ ಶೆಟ್ಟಿ.
ಕಾಂತಾರ' ಚಿತ್ರ, ಅಕ್ಟೋಬರ್ 2ರಂದು ಭಾರತದಾದ್ಯಂತ 7000ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ರಿಲೀಸ್ ಆಗುತ್ತದೆ. ಜೊತೆಗೆ 30 ದೇಶಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದು ಸ್ಪ್ಯಾನಿಷ್ ಭಾಷೆಯಲ್ಲಿ ಡಬ್ಬಿಂಗ್ ಕೂಡ ಆಗುತ್ತಿದೆ. ಮುಂದಿನ ದಿನಗಳಲ್ಲಿ ಭಾರತದ ಬೇರೆ ಮಹಾನಗರಗಳಲ್ಲೂ ಪ್ರೆಸ್ ಮೀಟ್ ಮಾಡುವ ಯೋಜನೆ ಇದೆ'' ಎಂದರು ನಿರ್ಮಾಪಕ ವಿಜಯ್ ಕಿರಗಂದೂರ್. ಇದೇ ವೇಳೆ ವೇದಿಕೆಯಲ್ಲಿ ಭಾರತೀಯ ಅಂಚೆ ಇಲಾಖೆ ವತಿಯಿಂದ ಇಂಡಿಯನ್ ಪೋಸ್ಟ್ ಕವರ್ ಹಾಗೂ ಪಿಕ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಯಿತು.
ಮೂರು ವರ್ಷ ನಾವು ಮನೆ ಬಿಟ್ಟು ಮಕ್ಕಳನ್ನು ಕಟ್ಟಿಕೊಂಡು ಕುಂದಾಪುರದಲ್ಲಿ ವಾಸವಿದ್ದು ಈ ಚಿತ್ರದಲ್ಲಿ ಪಾಲ್ಗೊಂಡಿದ್ದೇವೆ. ಹೊಂಬಾಳೆ ಫಿಲಂಸ್ ನಮಗೊಂದು ಫ್ಯಾಮಿಲಿ ಆಗಿ ನಿಂತಿದೆ. ಐದು ವರ್ಷಗಳ ಹಿಂದೆ ಪೋನ್ನಲ್ಲಿ ಒಂದು ಲೈನ್ ಕಥೆ ಕೇಳಿ ಸಿನಿಮಾ ಮಾಡಲು ಒಪ್ಪಿದವರು ವಿಜಯ್ ಕಿರಗಂದೂರ್ ಅವರು. ಈ ಚಿತ್ರದಲ್ಲಿ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದು ಖುಷಿ ಇದೆ. ಈ ಚಿತ್ರದ ಹಿಂದೆ ಒಂದು ಶಕ್ತಿಯಿರುವುದು ಖಂಡಿತ'' ಎಂದು ಚಿತ್ರದ ವಸ್ತ್ರ ವಿನ್ಯಾಸಕಿ ಪ್ರಗತಿ ಶೆಟ್ಟಿ ಮಾಹಿತಿ ನೀಡಿದರು.
Actor-director Rishab Shetty called Kantara 1 a five-year-long journey akin to a “five-year plan,” marked by struggles, sacrifices, and divine grace. Speaking at the film’s pre-release event following the trailer launch, he said
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
04-01-26 02:44 pm
Mangalore Correspondent
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm