ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm