ಬ್ರೇಕಿಂಗ್ ನ್ಯೂಸ್
04-01-21 02:59 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಡಾಲಿ ಧನಂಜಯ ಸದ್ಯ ಕಾಶ್ಮೀರದಲ್ಲಿ ಬೀಡುಬಿಟ್ಟಿದ್ದಾರೆ. ಧನಂಜಯ ನಟಿ ರೆಬಾ ಮೋನಿಕಾ ಜೊತೆ ಕಶ್ಮೀರದಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಧನಂಜಯ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ಧನಂಜಯ ಕಾಶ್ಮೀರ ಪ್ರವಾಸದಲ್ಲಿದ್ದಾರಾ ಅಂತ ಯೋಚಿಸುತ್ತೀರಾ?
ರೆಬಾ ಮೋನಿಕಾ, ಡಾಲಿ ಕಾಶ್ಮೀರದ ಫೋಟೊ ವೈರಲ್
ಧನಂಜಯ ಕಾಶ್ಮೀರ ಪ್ರವಾಸಕ್ಕೆ ಹೋಗಿರುವುದು ನಿಜ. ಆದರೆ ಚಿತ್ರೀಕರಣಕ್ಕಾಗಿ. ಹೌದು, ಡಾಲಿ ಸದ್ಯ ರತ್ನನ್ ಪ್ರಪಂಚ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಸದ್ಯ ಹಿಮ ಪ್ರದೇಶದಲ್ಲಿ ನಡೆಯುತ್ತಿದೆ. ಚಿತ್ರದ ನಾಯಕಿ ರೆಬಾ ಮೋನಿಕಾ ಜೊತೆ ಧನಂಜಯ ಕ್ಲಿಕ್ಕಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಂದಹಾಗೆ 'ರತ್ನನ್ ಪ್ರಪಂಚ' ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನು ಮೈಸೂರಿನಲ್ಲಿ ಯಶಸ್ವಿಯಾಗಿ ಮಾಡಿ ಮುಗಿಸಿದ್ದಾರೆ. ರತ್ನನ್ ಪ್ರಪಂಚ ಸಿನಿಮಾ ನಿರ್ದೇಶಕ ರೋಹಿತ್ ಪದಕಿ ಸಾರಥ್ಯದಲ್ಲಿ ಮೂಡಿಬರುತ್ತಿದೆ.
ಮಲಯಾಳಂ ಮತ್ತು ತಮಿಳು ಸಿನಿಮಾರಂಗದಲ್ಲಿ ಮಿಂಚುತ್ತಿದ್ದ ನಟಿ ರೆಬಾ ಮೋನಿಕಾ ಇದೀಗ ಕನ್ನಡ ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಮೊದಲ ಬಾರಿಗೆ ನಟ ಧನಂಜಯಗೆ ಜೋಡಿಯಾಗಿದ್ದು, ಕನ್ನಡ ಪ್ರೇಕ್ಷಕರ ಮುಂದೆ ಬರಲು ಉತ್ಸುಕರಾಗಿದ್ದಾರೆ. ಅಂದಹಾಗೆ ಧನಂಜಯ ಚಿತ್ರದಲ್ಲಿ ಮಧ್ಯಮ ವರ್ಗದ ಸಾಮಾನ್ಯ ವ್ಯಕ್ತಿ ರತ್ನಾಕರ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೆಚ್ಚು ಕೆಲಸ ಮಾಡುವ ಇನ್ಶೂರೆನ್ಸ್ ಏಜೆಂಟ್ ಆಗಿ ತನ್ನ ಕುಟುಂಬ ಸಾಗಿಸುವ ಪಾತ್ರದಲ್ಲಿ ಧನಂಜಯ ಮಿಂಚಿದ್ದಾರೆ. ವಿಶೇಷ ಎಂದರೆ ಸಿನಿಮಾದಲ್ಲಿ ಹಿರಿಯ ನಟಿ ಉಮಾಶ್ರೀ ಧನಂಜಯ ತಾಯಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಗ್ಯಾಪ್ ನ ಬಳಿಕ ಉಮಾಶ್ರೀ ರತ್ನನ್ ಪ್ರಪಂಚ ಸಿನಿಮಾ ಮೂಲಕ ನಟಿ ಉಮಾಶ್ರೀ ವಾಪಸ್ ಆಗಿದ್ದಾರೆ.

ಧನಂಜಯ ನಾಯಕ ಮತ್ತು ವಿಲನ್ ಎರಡು ಪಾತ್ರಗಳನ್ನು ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಸದ್ಯ ಧನಂಜಯ್ ಸಲಗ, ಪೊಗರು, ಯುವರತ್ನ, ಡಾಲಿ, ತೋತಾಪುರಿ, ಬಡವ ರಾಸ್ಕಲ್, ಹೆಡ್ ಬುಷ್, ಶಿವಪ್ಪ ಮತ್ತು ತೆಲುಗಿನ 'ಪುಷ್ಪ' ಸಿನಿಮಾದಲ್ಲಿ ಮಿಂಚುತ್ತಿದ್ದಾರೆ. ಅಲ್ಲದೆ ಇನ್ನೂ ಹೆಸರಿಡದ ಸಾಕಷ್ಟು ಸಿನಿಮಾಗಳು ಧನಂಜಯ್ ಬಳಿ ಇವೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm