ಬ್ರೇಕಿಂಗ್ ನ್ಯೂಸ್
05-01-21 04:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಮಗನ ಮುಡಿ ಕೊಟ್ಟ ಬಳಿಕ ರಾಧಿಕಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯಥರ್ವ ಯಶ್ ಹೊಸ ಗೆಟಪ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ ಯಥರ್ವ ಜನಿಸಿ 14 ತಿಂಗಳಾಗಿದೆ. ಇತ್ತೀಚಿಗಷ್ಟೆ ಅಂದರೆ ಅಕ್ಟೋಬರ್ 30ರಂದು ಮಗನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದರು. ಕೊರೊನಾ ಹಾವಳಿಯ ಪರಿಣಾಮ ಕುಟುಂಬದವರು ಮತ್ತು ತೀರ ಆಪ್ತರ ನಡುವೆ ಗೋವಾದ ಕಡಲ ಕಿನಾರೆಯಲ್ಲಿ ಮಗನ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದರು.

ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ತಂದೆ-ಮಗ
ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿ ಎರಡು ತಿಂಗಳಾಗಿದೆ. ಇದೀಗ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ಯಥರ್ವ ತಂದೆಯ ತೋಳಿನಲ್ಲಿ ನಗೆಬೀರುತ್ತಿರುವ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದಾರೆ. ಯಶ್ ಮತ್ತು ಯಥರ್ವ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಚೆ ಮತ್ತು ಹಸಿರು ಬಣ್ಣದ ಶರ್ಟ್ ನ್ ನಲ್ಲಿ ಪುಟ್ಟ ಪೋರ ಯಥರ್ವ ಕಂಗೊಳಿಸುತ್ತಿದ್ದಾರೆ.

ತನ್ನದೇ ಗೆಟಪ್ ನೋಡಿ ತಲೆಮೇಲೆ ಕೈ ಇಟ್ಟ ಯಥರ್ವ
ಮತ್ತೊಂದು ಫೋಟೋದಲ್ಲಿ ಯಥರ್ವ ಕನ್ನಡಿ ನೋಡಿಕೊಳ್ಳುತ್ತಾ ತನ್ನದೆ ಗೆಟಪ್ ನೋಡಿ ಅಶ್ಚರ್ಯಗೊಂಡು ತೆಲೆಮೇಲೆ ಕೈಹೊತ್ತು ಕುಳಿತಿದ್ದಾನೆ. ಈ ಎಡರು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಹರಿದುಬರುತ್ತಿದೆ.

ನಂಜುಂಡೇಶ್ವರ ಸನ್ನಿಧಿಯಲ್ಲಿ ಮಗಳ ಮುಡಿ ಕೊಡಿಸಿದ್ದ ಯಶ್ ದಂಪತಿ ಅಂದಹಾಗೆ ಯಶ್ ಮತ್ತು ರಾಧಿಕಾ ದಂಪತಿ ಮೊದಲ ಮಗಳು ಐರಾ ಮುಡಿಯನ್ನು ದಕ್ಷಿಣ ಕಾಶಿ ಎಂದೇ ಖ್ಯಾತಿಗಳಿಸಿರುವ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಕೊಡಿಸುವ ಮೂಲಕ ಹರಕೆ ಪೂರೈಸಿದ್ದರು. ಕಳೆದ ವರ್ಷ ಮಾರ್ಚ್ ನಲ್ಲಿ ಐರಾ ಕೇಶಮುಂಡನ ಮಾಡಿಸಿದ್ದರು. ಇದೀಗ ಎರಡನೇ ಪುತ್ರ ಯಥರ್ವ ಯಶ್ ಗೆ ಕೇಶ ಮುಂಡನಮಾಡಿಸಿದ್ದು, ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm