ಬ್ರೇಕಿಂಗ್ ನ್ಯೂಸ್
15-01-21 03:11 pm Source: FILMIBEAT ಸಿನಿಮಾ
ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ.
ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್. ಸಾಯಿಕಿರಣ್ ಅಲಿಯಾಸ್ ಕಿಚ್ಚ ಕಿರಣ್ ಗೆ ಬುಲೆಟ್ ಬೈಕ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ ನಟ ಕಿಚ್ಚ ಸುದೀಪ್. ಸಾಯಿಕಿರಣ್ ಗೆ ಇಷ್ಟವಾದ ಕಪ್ಪು ಬಣ್ಣದ ರಾಯಲ್ ಎನ್‌ಫೀಲ್ಡ್ ಬುಲೆಟ್ ಅನ್ನು ನೀಡಿದ್ದಾರೆ ಕಿಚ್ಚ.
ಈ ಬಗ್ಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಸಾಯಿ ಕಿರಣ್, ಇದು ನಿಜವಾಗಲೂ ನನಗೆ ಆಶ್ಚರ್ಯ, ಖುಷಿ ಏಕಕಾಲಕ್ಕೆ ತಂದಿದೆ. ನಾನು ಈ ಬೈಕ್‌ನಲ್ಲಿ ಮೊದಲಿಗೆ ಸುದೀಪ್ ಅವರನ್ನೇ ಕರೆದುಕೊಂಡು ಸುತ್ತಾಡುತ್ತೇನೆ ಎಂದಿದ್ದಾರೆ ಸಾಯಿ ಕಿರಣ್.
ಸುದೀಪ್ ಅವರ ಸ್ಪರ್ಷ ಸಿನಿಮಾದ ಕಾಲದಿಂದಲೂ ನಾನು ಅವರ ಅಭಿಮಾನಿ, ಆರು ವರ್ಷಗಳಿಂದಲೂ ಸುದೀಪ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೀನಿ. ಸುದೀಪ್ ಅವರಿಗೆ ಹಾಗೂ ಅವರ ಕುಟುಂಬಕ್ಕೆ ನಾನು ಚಿರರುಣಿ' ಎಂದಿದ್ದಾರೆ ಸಾಯಿ ಕಿರಣ್. ಕೆಲವು ದಿನಗಳ ಹಿಂದಷ್ಟೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸುದೀಪ್, ಅಲ್ಲಿ ಎದುರಾದ ಅಂಗಲಿಕಲ ಅಭಿಮಾನಿ ಒಬ್ಬನಿಗೆ ಆರ್ಥಿಕ ಸಹಾಯ ಒದಗಿಸಿದ್ದರು. ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಸುದೀಪ್.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm