ಬ್ರೇಕಿಂಗ್ ನ್ಯೂಸ್
16-01-21 05:16 pm Source: FILMIBEAT Bharath Kumar K ಸಿನಿಮಾ
ಗೋವಾದ 51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಆರಂಭವಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಗೋವಾ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರ ಜೊತೆ ಕನ್ನಡ ನಟ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗೋವಾ ಚಿತ್ರೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುದೀಪ್ ಅವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಈ ವೇಳೆ ಸಿನಿಮಾ ಜಗತ್ತಿನಲ್ಲಿ 25 ವರ್ಷ ಪೂರೈಸಿದ ಸುದೀಪ್ ಸಾಧನೆ ಗೌರವಿಸಿದ ಗೋವಾ ಚಿತ್ರೋತ್ಸವ ಕಿಚ್ಚನಿಗೆ ಶುಭಾಶಯ ತಿಳಿಸಿತು.
''ಪ್ರತಿಯೊಬ್ಬರಿಗೆ ಕನ್ನಡ ಚಿತ್ರರಂಗದ ಪರವಾಗಿ ಕರ್ನಾಟಕದ ಪರವಾಗಿ ಈ ಕಿಚ್ಚನಿಂದ ನಮಸ್ತೆ'' ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಸುದೀಪ್ ಗೋವಾದಲ್ಲಿ ಕನ್ನಡತನ ಸಾರಿದರು.
ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಸಹ ಈ ಕುರಿತು ಟ್ವೀಟ್ ಮಾಡಿ ''ಗೋವಾ ಚಿತ್ರೋತ್ಸವದಲ್ಲಿ ಸುದೀಪ್ ಮುಖ್ಯ ಅತಿಥಿಯಾಗಿರುವುದು ಕರ್ನಾಟಕದ ಹೆಮ್ಮೆ'' ಎಂದಿದ್ದರು. ಇನ್ನು 51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವವು ಜನವರಿ 16 ರಿಂದ ಜನವರಿ 24 ರ ವರೆಗೆ ನಡೆಯಲಿದೆ. ವಿಶ್ವದ ಹಲವು ದೇಶಗಳ ಹಲವಾರು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಪ್ರದರ್ಶನ ಕಾಣಲಿವೆ. ವಿವಿಧ ದೇಶಗಳ 224 ಸಿನಿಮಾಗಳು ಭಾಗವಹಿಸಿವೆ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm