ಬ್ರೇಕಿಂಗ್ ನ್ಯೂಸ್
20-01-21 11:47 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿಯ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಬ್ಬರು ಮಕ್ಕಳನ್ನು ಬೆಳ್ಳಿತೆರೆ ಮೇಲೆ ನೋಡಬೇಕು ಎಂದು ನಟಿ ಶ್ರೀದೇವಿ ಕನಸು ಕಂಡಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮೊದಲ ಮಗಳು ಜಾಹ್ನವಿ ಕಪೂರ್ ಚೊಚ್ಚಲ ಸಿನಿಮಾ ನೋಡುವ ಅವಕಾಶ ಸಹ ಶ್ರೀದೇವಿಗೆ ಸಿಕ್ಕಿಲ್ಲ. ಅಂದಹಾಗೆ ಜಾಹ್ನವಿ ಸದ್ಯ ಬಾಲಿವುಡ್ ನಲ್ಲಿ ಸಕ್ರೀಯರಾಗಿದ್ದಾರೆ. ಧಡಕ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಕನ ಬಳಿಕ ಇದೀಗ ತಂಗಿ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಖುಷಿ ಕಪೂರ್ ಬಾಲಿವುಡ್ ಎಂಟ್ರಿ ಬಗ್ಗೆ ತಂದೆ ಬೋನಿ ಕಪೂರ್ ಮಾಹಿತಿ ನೀಡಿದ್ದಾರೆ. ಆಂಗ್ಲ ವೆಬ್ ಪೋರ್ಟಲ್ ಜೊತೆ ಮಾತನಾಡಿದ ಬೋನಿ ಕಪೂರ್, 'ನನ್ನ ಬಳಿ ನಿರ್ಮಾಣ ಮಾಡುವ ಸಾಮರ್ಥ್ಯವಿದೆ. ಆದರೆ ಅವಳು ಬೇರೆ ನಿರ್ಮಾಣ ಸಂಸ್ಥೆಯಿಂದ ಎಂಟ್ರಿ ಕೊಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ನಾನು ಅವಳ ತಂದೆ, ಕಂಫರ್ಟ್ ನಿಂದ ಹೊರಬಂದು ಅವಳು ಸಿನಿಮಾ ಮಾಡಬೇಕು' ಎಂದು ಹೇಳಿದ್ದಾರೆ.
'ಬಾಲಿವುಡ್ ನಲ್ಲಿ ಅವಳು ಅವಳದೇ ಆದ ಹೆಜ್ಜೆ ಕಂಡುಕೊಳ್ಳಬೇಕು ಎನ್ನುವುದು ನನ್ನ ಬಯಕೆ. ಸುರಕ್ಷಿತ ಎಂದು ಭಾವಿಸುವ ಯಾರಾದರು ಅವಳನ್ನು ಲಾಂಚ್ ಮಾಡಬಹುದು' ಎಂದು ಹೇಳಿದ್ದಾರೆ. ಅಂದಹಾಗೆ ಖುಷಿ ಈಗಾಗಲೇ ಬಾಲಿವುಡ್ ಎಂಟ್ರಿಗೆ ತಯಾರಿ ಮಾಡಿಕೊಂಡಿದ್ದಾರೆ. ಯುಎಸ್ ನಲ್ಲಿ ನಟನೆಯ ತರಬೇತಿ ಕಲಿತು ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀವ್ ಆಗಿರುವ ಖುಷಿ ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಖುಷಿ ಯಾವ ಸಿನಿಮಾದ ಮೂಲಕ ಬಣ್ಣ ಹಚ್ಚಲಿದ್ದಾರೆ, ನಿರ್ದೇಶಕ, ನಿರ್ಮಾಪಕ, ಸಹ ನಟ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂದಹಾಗೆ ಶ್ರೀದೇವಿ ಮೊದಲ ಪುತ್ರಿ ಜಾಹ್ನವಿ ಕಪೂರ್ ಕೊನೆಯಾದಾಗಿ ಗುಂಜನ್ ಸಕ್ಸೇನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ದೋಸ್ತಾನ-2, ರೂಹಿ ಅಫ್ಜಾನಾ, ಗುಡ್ ಲಕ್ ಜೆರ್ರಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm