ಬ್ರೇಕಿಂಗ್ ನ್ಯೂಸ್
22-01-21 03:39 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನಟ ಮತ್ತು ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತನ್ನ ಹುಟ್ಟುಹಬ್ಬವನ್ನು ನಿಖಿಲ್ ಅದ್ದೂರಿಯಾಗಿ, ಅಪಾರ ಸಂಖ್ಯೆಯ ಅಭಿಮಾನಿಗಳ ನಡುವೆ ಆಚರಣೆ ಮಾಡಿಕೊಂಡಿದ್ದಾರೆ. ಕೊರೊನಾ ಸಮಯದಲ್ಲೂ ಸಾವಿರಾರು ಸಂಖ್ಯೆಯ ಅಭಿಮಾನಿಗಳ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡು ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತರರಿಗೆ ಮಾದರಿ ಆಗಬೇಕಾದವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಹೀಗೆ ಮಾಡಿದರೆ, ಸಮಾಜಕ್ಕೆ ಏನು ಸಂದೇಶ ರವಾನಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಕೊರೊನಾ ಸಮಯದಲ್ಲಿ ಗುಂಪು ಸೇರಬಾರದು, ಸಾಮಾಜಿಕ ಅಂತರ ಕಾಪಾಡಬೇಕು ಎನ್ನುವುದು ಕೇವಲ ಹೇಳಿಕೆಗಳು ಮಾತ್ರನಾ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.
ಕೊರೊನಾ ಕಾರಣ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿರುವ ಸ್ಟಾರ್ಸ್
ಈಗಾಗಲೇ ಅನೇಕ ಸ್ಟಾರ್ ಕಲಾವಿದರು ಈ ಬಾರಿ ಅದ್ದೂರಿ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿ ಸರಳವಾಗಿ ಕುಟುಂಬದ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಲ್ಲದೆ ಅಭಿಮಾನಿಗಳಿಗೂ ಈ ಸಮಯದಲ್ಲಿ ಮನೆಯ ಬಳಿ ಬರಬೇಡಿ ಎಂದು ಮನವಿ
100 ಕೆಜಿ ಕೇಕ್ ಕತ್ತರಿಸಿದ ನಿಖಿಲ್
ಆದರೆ ನಿಖಿಲ್ ಜೆಪಿ ನಗರದ ತನ್ನ ನಿವಾಸದಲ್ಲಿ ಅಭಿಮಾನಿಗಳ ಜೊತೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು ತಂದಿದ್ದ 100 ಕೆಜಿ ಕೇಕ್ ಕತ್ತರಿಸಿದ್ದಾರೆ. ಸಾವಿರಾರು ಅಭಿಮಾನಿಗಳು ನಿಖಿಲ್ ನಿವಾಸದ ಮುಂದೆ ಜಮಾಯಿಸಿದ್ದರು.
ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ
ಹುಟ್ಟುಹಬ್ಬ ಹಿನ್ನೆಲೆ ನಿಖಿಲ್ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಜೊತೆಗೆ ದೂರ ಊರುಗಳಿಂದ ಬಂದಿರುವ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಸಹ ಮಾಡಿಸಲಾಗಿದೆ.
ನಿಖಿಲ್ ಕುಮಾರ್ ಪ್ರತಿಕ್ರಿಯೆ
ಇದೇ ಸಮಯದಲ್ಲಿ ಮಾತನಾಡಿದ ನಿಖಿಲ್ ಕುಮಾರ್ 'ಕೊರೊನಾ ಸಂಕಷ್ಟ ಕಾಲದಲ್ಲಿ ಹುಟ್ಟುಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ. ಆದರೆ, ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹುಟ್ಟು ಹಬ್ಬ ಆಚರಣೆಗೆ ಇಲ್ಲಿ ಬಂದಿದ್ದೀರಾ. ನೀವೆಲ್ಲಾ ಸುರಕ್ಷಿತವಾಗಿ ಮನೆ ತಲುಪಬೇಕು, ಆಗಲೇ ನನಗೆ ನೆಮ್ಮದಿ. ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ, ಎಲ್ಲರಿಗೂ ಧನ್ಯವಾದಗಳು' ಎಂದಿದ್ದಾರೆ.
ಜೆಡಿಎಸ್ ಎಂದರೆ ಯುವಕರ ಪಕ್ಷ
ಇನ್ನು 'ಜೆಡಿಎಸ್ ಪಕ್ಷ ಅಂದ್ರೆ ರೈತರ ಪಕ್ಷ, ಮುಂದಿನ ದಿನಗಳಲ್ಲಿ ಜೆಡಿಎಸ್ ಅಂದ್ರೆ ಯುವಕರ ಪಕ್ಷವೂ ಆಗುತ್ತದೆ. ನಾವೆಲ್ಲ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡಿಯೋಣ' ಎಂದು ಹೇಳಿದ್ದಾರೆ.
ನಿಖಿಲ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರೈಡರ್ ಸಿನಿಮಾದ ಟೀಸರ್ ರಿಲೀಸ ಮಾಡಲಾಗಿದೆ. ರೈಡರ್ ಸಿನಿಮಾ ಕನ್ನಡದ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗಿದೆ. ರೈಡರ್ ಚಿತ್ರಕ್ಕೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರೈಡರ್ ನಿಜ ಜೀವನದಿಂದ ಸ್ಫೂರ್ತಿ ಪಡೆದ ಸಿನಿಮಾ ಎಂದು ಹೇಳಲಾಗುತ್ತಿದೆ. ಕ್ರೀಡಾಧಾರಿತ ಸಿನಿಮಾ ಇದಾಗಿದೆ ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ಸಧ್ಯದಲ್ಲೇ ಬಹಿರಂಗವಾಗುವ ಸಾಧ್ಯತೆ ಇದೆ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm