ಬ್ರೇಕಿಂಗ್ ನ್ಯೂಸ್
25-01-21 02:31 pm Headline Karnataka News Network ಸಿನಿಮಾ
ಬೆಂಗಳೂರು, ಜ.25 : ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಖ್ಯಾತಿ ಗಳಿಸಿದ್ದ ರೂಪದರ್ಶಿ ಮತ್ತು ನಟಿಯಾಗಿದ್ದ ಜಯಶ್ರೀ ರಾಮಯ್ಯ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ವೃದ್ಧಾಶ್ರಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಜಯಶ್ರೀ ರಾಮಯ್ಯ ಶವ ಪತ್ತೆಯಾಗಿದೆ. ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಬಿಗ್ ಬಾಸ್ ಕನ್ನಡದಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ಅವರು ಈ ಹಿಂದೆ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದರು. ಹಾಗೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಹಿರಂಗವಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಸಂದೇಶ ಹಾಕಿದ್ದು ಇದೆ. ಆದರೆ, ನಂತರ ಸಿನಿಮಾರಂಗದ ಪ್ರಮುಖರು ಜಯಶ್ರೀಗೆ ಸಾಂತ್ವನ ಹೇಳಿದ್ದರು. ಆದರೆ, ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಜಯಶ್ರೀ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.


ಆದರೆ, ಜಯಶ್ರೀ ಅವರು ವೃದ್ಧಾಶ್ರಮಕ್ಕೆ ತೆರಳಿ ದಿಢೀರ್ ಆತ್ಮಹತ್ಯೆಗೆ ಶರಣಾಗಲು ಏನು ಕಾರಣ ಎಂಬುದು ಗೊತ್ತಾಗಿಲ್ಲ. ಆರ್ಥಿಕ ಬಿಕ್ಕಟ್ಟು ಜೊತೆಗೆ ಮಾನಸಿಕ ಸಮಸ್ಯೆ ಎದುರಿಸಿದ್ದ ಜಯಶ್ರೀ ಕಳೆದ ಜುಲೈನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಫೇಸ್ಬುಕ್ ಲೈವ್ ಬಂದಿದ್ದರು. ತಾನಿನ್ನು ಆತ್ಮಹತ್ಯೆ ಮಾಡಿಕೊಳ್ಳಲ್ಲ ಎಂದಿದ್ದರು. ಅದಕ್ಕೂ ಹಿಂದೆ ಫೇಸ್ಬುಕ್ ಲೈವಲ್ಲಿ ಬಂದು ಸಾಯುತ್ತೇನೆ ಎಂದಿದ್ದರು. ತನಗೆ ಮೋಸ ಆಗಿದೆ, ಚಿಕ್ಕ ವಯಸ್ಸಿನಲ್ಲಿ ನನ್ನನ್ನು ಮೋಸ ಮಾಡಿದ್ದಾರೆ. ಅದರಿಂದ ಇನ್ನೂ ಹೊರಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಜಯಶ್ರೀ ಸಾವಿನಿಂದ ಅವರ ಆಪ್ತರು ತುಂಬ ನೊಂದುಕೊಂಡಿದ್ದಾರೆ. ಜಯಶ್ರೀ ಅವರು ಉಪ್ಪು ಹುಳಿ ಖಾರ ಚಿತ್ರದಲ್ಲಿ ನಟಿಸಿದ್ದರು.
Bigg Boss Kannada 3 contestant and actress Jayashree Ramaiah committed suicide at an old age home in Bengaluru.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm