ಬ್ರೇಕಿಂಗ್ ನ್ಯೂಸ್
25-01-21 03:46 pm Source: FILMIBEAT Manjunatha C ಸಿನಿಮಾ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ.
ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ ದೇಣಿಗೆ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಅವರು ಬರೋಬ್ಬರಿ 1.50 ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ದೇಣಿಗೆ ನೀಡಿದ ರಸೀದಿಯ ಚಿತ್ರವನ್ನು ಅಮೂಲ್ಯ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.
ಅಮೂಲ್ಯ ಮಾವ ರಾಜಕಾರಣಿ ಜಿ.ಎಚ್.ರಾಮಚಂದ್ರ ಅವರೂ ಸಹ ದೇಣಿಗೆ ನೀಡಿದ್ದು. ರಾಮಚಂದ್ರ ಅವರು ಬರೋಬ್ಬರಿ 1 ಲಕ್ಷ ಮೊತ್ತವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ದಂಪತಿ, 'ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಿಮಿತ್ತ ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ವ್ಯಯಿಸುತ್ತಿದ್ದ ಮೊತ್ತಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಪ್ರಭು ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು' ಎಂದಿದ್ದಾರೆ. ಕನ್ನಡದ ನಟಿ ಪ್ರಣಿತಾ ಸುಭಾಷ್ ಸಹ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ನಟ ಪವನ್ ಕಲ್ಯಾಣ್ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ಸಹಸ ದೊಡ್ಡ ಮೊತ್ತದ ದೇಣಿಗೆಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm