ಬ್ರೇಕಿಂಗ್ ನ್ಯೂಸ್
27-01-21 02:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ. ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm