ಬ್ರೇಕಿಂಗ್ ನ್ಯೂಸ್
21-02-21 11:48 am Source: FILMIBEAT Shruthi Gk ಸಿನಿಮಾ
ಟಾಲಿವುಡ್ ನ ಮೆಗಾಸ್ಟಾರ್ ಚಿರಂಜೀವಿ ಮತ್ತು ಪತ್ನಿ ಸುರೇಖಾ ದಂಪತಿಗೆ ಇಂದು ವಿಶೇಷವಾದ ದಿನ. ಹೌದು, ಚಿರಂಜೀವಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಿನವಿದು. 1980ರಲ್ಲಿ ಅಂದರೆ 42 ವರ್ಷಗಳ ಹಿಂದೆ ಮೆಗಾಸ್ಟಾರ್, ಸುರೇಖಾ ಜೊತೆ ಹಸೆಮಣೆ ಏರಿದ್ದಾರೆ. 42ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಚಿರಂಜೀವಿ ದಂಪತಿ ಕುಟುಂಬದ ಜೊತೆ ಸಂಭ್ರಮಿಸಿದ್ದಾರೆ. ಟಾಲಿವುಡ್ ನ ಈ ಸುಂದರ ಜೋಡಿಗೆ ಅಭಿಮಾನಿಗಳಿಂದ ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ವಿಶೇಷ ಎಂದರೆ ಚಿರಂಜೀವಿ ಪ್ರೀತಿಯ ಪುತ್ರ ರಾಮ್ ಚರಣ್ ತಂದೆ-ತಾಯಿಯ ವಿವಾಹ ವಾರ್ಷಿಕೋತ್ಸವಕ್ಕೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಚಿರಂಜೀವಿ ಮತ್ತು ಸುರೇಖಾ ಅವರ ಸುಂದರ ಫೋಟೋವನ್ನು ಶೇರ್ ಮಾಡಿ, ದೊಡ್ಡ ಶಕ್ತಿ ಎಂದು ಹೇಳಿದ್ದಾರೆ. 'ನನ್ನ ದೊಡ್ಡ ಶಕ್ತಿ. ನಿಮ್ಮಿಬ್ಬರಿಗೂ 42ನೇ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು' ಎಂದು ಹೇಳಿದ್ದಾರೆ.
ಚಿರಂಜೀವಿ ಪತ್ನಿ ಸುರೇಖಾ ಚಿತ್ರರಂಗದಿಂದ ದೂರ ಇದ್ದರೂ ಪತಿಯ ಸಿನಿ ಜೀವನಕ್ಕೆ ಆಧಾರಸ್ತಂಭವಾಗಿದ್ದಾರೆ. ಚಿರಂಜೀವಿ ಮತ್ತು ಸುರೇಖಾ ದಂಪತಿಗೆ ಮೂವರು ಮಕ್ಕಳು. ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ. ಪುತ್ರ ರಾಮ್ ಚರಣ್ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದು, ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ.
ಚಿರಂಜೀವಿ ಸದ್ಯ ಆಚಾರ್ಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಸಾಕಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಈ ಸಿನಿಮಾ ಬಳಿಕ ಚಿರಂಜೀವಿ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಪುತ್ರ ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಳಿಕ ನಿರ್ದೇಶಕ ಶಂಕರ್ ಜೊತೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm