ಬ್ರೇಕಿಂಗ್ ನ್ಯೂಸ್
07-03-21 03:34 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಪ್ರಿನ್ಸೆಸ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 37ನೇ ವಸಂತಕ್ಕೆ ಕಾಲಿಡುತ್ತಿರುವ ಸಡಗರದಲ್ಲಿದ್ದಾರೆ ನಟಿ ರಾಧಿಕಾ ಪಂಡಿತ್. ಈ ಸಂಭ್ರಮ-ಸಡಗರದಲ್ಲಿ ತಮ್ಮೆಲ್ಲ ಪ್ರೀತಿಯ ಅಭಿಮಾನಿಗಳಿಗೆ ರಾಧಿಕಾ ಪಂಡಿತ್ ಒಂದು ಪತ್ರ ಬರೆದಿದ್ದಾರೆ.
ರಾಧಿಕಾ ಪಂಡಿತ್ ಬರೆದಿರುವ ಪತ್ರದಲ್ಲಿ ಏನಿದೆ.?
''ನಮಸ್ಕಾರ ಎಲ್ಲರಿಗೂ..
ಪ್ರತಿ ವರ್ಷ ಬೇರೆ ಜಾಗಗಳಿಂದ ಬೇರೆ ಊರಿನಿಂದ ನನ್ನ ಹುಟ್ಟಿದ ಹಬ್ಬ ಆಚರಣೆ ಮಾಡಲು ಭೇಟಿ ಮಾಡಲು ಬರುತ್ತಿದ್ದೀರಿ. ಕಳೆದ ಎರಡು ವರ್ಷಗಳಿಂದ ಇದು ಸಾಧ್ಯವಾಗಲಿಲ್ಲ. ಕೊರೊನಾ ಎಲ್ಲೆಡೆ ಇರುವುದರಿಂದ ನಮ್ಮ ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ನಿಮ್ಮನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲವೆಂದು ತುಂಬಾ ಕಾಡುತ್ತಿದೆ. ಈ ಬಾರಿ ಯಾವುದೇ ಆಚರಣೆ ಮನೆಯ ಬಳಿ ಇರುವುದಿಲ್ಲ. ದಯವಿಟ್ಟು ಯಾರೂ ಬೇಜಾರಾಗಬೇಡಿ. ಆದರೂ ನಿಮ್ಮ ಎಲ್ಲಾ ಸೋಷಿಯಲ್ ಮೀಡಿಯಾ ಮೆಸೇಜ್ ನೋಡುತ್ತಿದ್ದೇನೆ. ಸಾಧ್ಯವಾದಷ್ಟು ರಿಪ್ಲೈ ಕೊಡುತ್ತೇನೆ. ಮತ್ತು ಎಲ್ಲಾ ಪ್ರೀತಿಗೂ ಧನ್ಯವಾದ ಹೇಳಲು ಇಷ್ಟಪಡುತ್ತೇನೆ - ನಿಮ್ಮ ರಾಧಿಕಾ ಪಂಡಿತ್'' ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಪ್ರತಿ ವರ್ಷ ಆಚರಣೆ
ಜನ್ಮದಿನದ ಸಡಗರವನ್ನು ರಾಧಿಕಾ ಪಂಡಿತ್ ಪ್ರತಿ ವರ್ಷ ಅಭಿಮಾನಿಗಳ ಜೊತೆಗೆ ಸೆಲೆಬ್ರೇಟ್ ಮಾಡುತ್ತಿದ್ದರು. ಅಭಿಮಾನಿಗಳು ತರುತ್ತಿದ್ದ ಕೇಕ್ ಕಟ್ ಮಾಡುವ ಮೂಲಕ ಖುಷಿ ಪಡುತ್ತಿದ್ದರು ರಾಧಿಕಾ ಪಂಡಿತ್. ಆದ್ರೀಗ ಕೋವಿಡ್ ಇರುವ ಕಾರಣ ಅಭಿಮಾನಿಗಳ ಜೊತೆಗಿನ ಬರ್ತಡೇ ಸೆಲೆಬ್ರೇಷನ್ ಗೆ ರಾಧಿಕಾ ಪಂಡಿತ್ ಬ್ರೇಕ್ ಹಾಕಿದ್ದಾರೆ.
ಫ್ಯಾಮಿಲಿ ಜೊತೆಗೆ ಬರ್ತಡೇ
ಪತಿ ರಾಕಿಂಗ್ ಸ್ಟಾರ್ ಯಶ್, ಪುತ್ರ ಯಥರ್ವ್, ಪುತ್ರಿ ಆಯ್ರಾ ಹಾಗೂ ತಂದೆ-ತಾಯಿ ಜೊತೆಗೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ ರಾಧಿಕಾ ಪಂಡಿತ್.
ಅಂದ್ಹಾಗೆ, ಪುಟಾಣಿ ಮಕ್ಕಳ ಆರೈಕೆಯಲ್ಲೇ ಬ್ಯುಸಿಯಾಗಿರುವ ರಾಧಿಕಾ ಪಂಡಿತ್ ಯಾವ ಚಿತ್ರವನ್ನೂ ಸದ್ಯಕ್ಕೆ ಒಪ್ಪಿಕೊಂಡಿಲ್ಲ. 'ಆದಿಲಕ್ಷ್ಮಿ ಪುರಾಣ' ಚಿತ್ರದ ಬಳಿಕ ಯಾವುದೇ ಚಿತ್ರಕ್ಕೆ ರಾಧಿಕಾ ಪಂಡಿತ್ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.
This News Article Is A Copy Of FILMIBEAT
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm