ಬ್ರೇಕಿಂಗ್ ನ್ಯೂಸ್
08-03-21 12:54 pm Source: FILMIBEAT ಸಿನಿಮಾ
'ಬಿಗ್ ಬಾಸ್ ಕನ್ನಡ 8'ರಿಂದ ಮೊದಲ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ. ಈ ಬಾರಿ ಬಿಗ್ ಬಾಸ್ ಗೆ ಮೊದಲ ಸ್ಪರ್ಧಿಯಾಗಿ ಧನುಶ್ರೀ ಮನೆಯೊಳಗೆ ಕಾಲಿಟ್ಟಿದ್ದರು. ಆದರೆ ಧನುಶ್ರೀ ಮನೆಯೊಳಗೆ ಹೋದ ವೇಗದಲ್ಲೇ ಹೊರಬಂದಿದ್ದಾರೆ.
ಟಿಕ್ ಟಾಕ್ ಸ್ಟಾರ್ ಆಗಿದ್ದ ಧನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದವರು. ಬಿಗ್ ಮನೆಯಲ್ಲೂ ಧನುಶ್ರೀ ಅವರಿಂದ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಮೊದಲ ವಾರದಲ್ಲೇ ಧನುಶ್ರೀ ಮನೆಯವರ ಮತ್ತು ಪ್ರೇಕ್ಷಕರ ಮನಗೆಲ್ಲುವಲ್ಲಿ ವಿಫಲರಾಗಿದ್ದಾರೆ.
ಈ ಬಾರಿ ಮನೆಯಿಂದ ಧನುಶ್ರೀ ಹೊರ ಬಂದಿದ್ದಾರೆ. ನಿರ್ಮಲಾ, ರಘು ಗೌಡ ಮತ್ತು ಧನುಶ್ರೀ ಈ ವಾರ ಮನೆಯಿಂದ ಹೊರಬರಲು ನಾಮಿನೇಟ್ ಆಗಿದ್ದರು. ಕೊನೆಯದಾಗಿ ಬಿಗ್ ಮನೆಯಿಂದ ಧನುಶ್ರೀ ಹೊರಬಂದಿದ್ದಾರೆ.
ಬರುವಾಗ ಬಿಗ್ ಬಾಸ್ ನೀಡಿದ ವಿಶೇಷ ಅಧಿಕಾರವನ್ನು ಬಳಿಸಿಕೊಂಡು ಧನುಶ್ರೀ ರಘು ಗೌಡ ಅವರಿಗೆ ವಿಶೇಷ ಗಿಫ್ಟ್ ನೀಡಿದ್ದಾರೆ.
ಈ ವಾರ ಬಿಗ್ ಬಾಸ್ ನಾಮಿನೇಷನ್ ನಿಂದ ರಘು ಗೌಡ ಅವರನ್ನು ಬಚಾವ್ ಮಾಡಿದ್ದಾರೆ. ಈ ಮೂಲಕ ರಘು ಗೌಡ ಈ ವಾರ ನೇಮಿನೇಷನ್ ನಿಂದ ಸೇಫ್ ಆಗಿದ್ದಾರೆ.
ಮೊದಲ ವಾರದಲ್ಲೇ ಧನುಶ್ರೀ ಕಳಪೆ ಪ್ರದರ್ಶನ ನೀಡಿ ಜೈಲು ಸೇರಿದ್ದರು. ಈ ಬಾರಿಯ ಬಿಗ್ ಬಾಸ್ ನಲ್ಲಿ ಜೈಲು ಸೇರಿದ ಮೊದಲ ಸ್ಪರ್ಧಿ ಧನುಶ್ರೀ ಆಗಿದ್ದರು. ಮೇಕಪ್ ವಿಚಾರಕ್ಕೆ ಧನುಶ್ರೀ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು.
ಮನೆಯೊಳಗೂ ಮೇಕಪ್ ವಿಚಾರವಾಗಿ ಉಳಿದ ಸ್ಪರ್ಧಿಗಳು ಕಾಲೆಳೆಯುತ್ತಿದ್ದರು. ಆದರೆ ಧನುಶ್ರೀ ಯಾವುದಕ್ಕೂ ತಲೆಕೆಡಿಸಿಕೊಂಡಿರಲಿಲ್ಲ. ಸದ್ಯ ಮನೆಯಲ್ಲಿ 16 ಸ್ಪರ್ಧಿಗಳಿದ್ದು ಮುಂದಿನ ವಾರ ಯಾರು ಮನೆಯಿಂದ ಹೊರಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article Is A Copy Of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm