ಬ್ರೇಕಿಂಗ್ ನ್ಯೂಸ್
10-03-21 10:54 am Source: FILMIBEAT ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸ್ಯಾಂಡಲ್ ವುಡ್ ನಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಬಣ್ಣದ ಲೋಕದಲ್ಲಿ 25 ವರ್ಷ ಕಳೆದ ಸಂಭ್ರಮವನ್ನು ಕಿಚ್ಚ ಸುದೀಪ್ ಇತ್ತೀಚಿಗಷ್ಟೆ ದುಬೈನಲ್ಲಿ ಆಚರಿಸಿಕೊಂಡಿದ್ದರು. ಬುರ್ಜ್ ಖಲೀಫಾ ಮೇಲೆ ತನ್ನ 25 ವರ್ಷದ ಪಯಣದ ಝಲಕ್ ನೋಡಿ ಕಣ್ತುಂಬಿಕೊಂಡಿದ್ದರು. ಇದೀಗ ಕೋಟಿಗೊಬ್ಬ-3 ಸಿನಿಮಾತಂಡ ಕಿಚ್ಚನ ಬೆಳ್ಳಿಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಮುಂದಾಗಿದೆ.
ಕೋಟಿಗೊಬ್ಬ-3 ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಈ ಬಗ್ಗೆ ದೊಡ್ಡದಾಗಿ ಪ್ಲಾನ್ ಮಾಡಿದ್ದಾರೆ. ಚಿತ್ರದ ಘಟಾನುಘಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಅಭಿನಯ ಚಿಕ್ರವರ್ತಿ ಸುದೀಪ್ ಅವರ 25 ವರ್ಷದ ಪಯಣವನ್ನು ಸ್ಮರಿಸುವ ಕಾರ್ಯಕ್ರಮದಲ್ಲಿ ಯಾರೆಲ್ಲ ಇರಲಿದ್ದಾರೆ? ಈ ಕಾರ್ಯಕ್ರಮ ಎಲ್ಲಿ ನಡೆಯಲಿದೆ? ಇಲ್ಲಿದೆ ಮಾಹಿತಿ...
ಮಾರ್ಚ್ 15ಕ್ಕೆ ಕಾರ್ಯಕ್ರಮ
ನಿರ್ಮಾಪಕ ಸೂರಪ್ಪ ಬಾಬು ಮತ್ತು ಸಿನಿಮಾತಂಡ ಸೇರಿ ಕಿಚ್ಚನ 25 ವರ್ಷದ ಪಯಣವನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ, ಇದೆ ತಿಂಗಳು ಮಾರ್ಚ್ 15ರಂದು ಈ ಕಾರ್ಯಕ್ರಮ ನಡೆಯುತ್ತಿದೆ. ಸಂಜೆ 6.30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಚಿತ್ರರಂಗದ ಮತ್ತು ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

ಸಿಎಂ ಯಡಿಯೂರಪ್ಪ ಅವರಿಗೆ ಆಹ್ವಾನ
ಸುದೀಪ್ ಬೆಳ್ಳಿ ಮಹೋತ್ಸವದಲ್ಲಿ ಚಿತ್ರರಂಗದ ಗಣ್ಯರ ಜೊತೆಗೆ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಈಗಾಗಲೇ ನಿರ್ಮಾಪಕ ಸೂರಪ್ಪ ಬಾಬು ಸಿಎಂ ಯಡಿಯೂರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗುತ್ತಿದೆ. ವೇದಿಕೆಯಲ್ಲಿ ಸಿಎಂ ಯಡಿಯೂರಪ್ಪ, ಕಿಚ್ಚ ಸುದೀಪ್ ಅವರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ ಎನ್ನಲಾಗುತ್ತಿದೆ.
ಶಿವಣ್ಣ, ರವಿಚಂದ್ರನ್ ಭಾಗಿ
ಸಿನಿಮಾರಂಗದ ಅನೇಕ ಗಣ್ಯರು ಸಹ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ಸಾಕಷ್ಟು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಶಾಸಕ ಮತ್ತು ನಿರ್ಮಾಪಕ ಮುನಿರತ್ನ, ರಾಕ್ ಲೈನ್ ವೆಂಕಟೇಶ್ ಕೂಡ ಹಾಜರಿರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಕೋಟಿಗೊಬ್ಬ-3 ಹಾಡುಗಳಿಗೆ ನೃತ್ಯ ಕಾರ್ಯಕ್ರಮ
ವೇದಿಕೆ ಮೇಲೆ ವಿಶೇಷ ಕಾರ್ಯಕ್ರಗಳು ಸಹ ಜರಿಗಲಿದ್ದು, ಕೋಟಿಗೊಬ್ಬ-3 ಸಿನಿಮಾದ ಹಾಡುಗಳಿಗೆ ವಿವಿಧ ನೃತ್ಯ ತಂಡಗಳಿಂದ ನೃತ್ಯ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಕಿಚ್ಚ ಸುದೀಪ್ ಅವರ 25 ವರ್ಷದ ಜರ್ನಿಯ ವಿಶೇಷ ವಿಡಿಯೋ ಪ್ರದರ್ಶನ ಮಾಡಲು ಸಿನಿಮಾತಂಡ ನಿರ್ಧರಿಸಿದೆ.
ಕೋಟಿಗೊಬ್ಬ-3 ಸಿನಿಮಾ ಬಗ್ಗೆ
ಶಿವ ಕಾರ್ತಿಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಕೋಟಿಗೊಬ್ಬ-3 ಸಿನಿಮಾದ ಮೇಕಿಂಗ್ ವಿಡಿಯೋ ಇತ್ತೀಚಿಗಷ್ಟೆ ರಿಲೀಸ್ ಆಗಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದಲ್ಲಿ ಕಿಚ್ಚನಿಗೆ ಜೋಡಿಯಾಗಿ ಮಲಯಾಳಂ ಸುಂದರಿ ಮಡೋನ್ನಾ ಸೆಬಾಸ್ಟಿನ್ ಕಾಣಿಸಿಕೊಂಡಿದ್ದಾರೆ. ಇನ್ನು ಉಳಿದಂತೆ ಶ್ರದ್ಧಾ ದಾಸ್, ರವಿ ಶಂಕರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಸಾಕಷ್ಟು ದೊಡ್ಡ ತಾರಬಳಗವೇ ಇದೆ.
This News Article Is A Copy Of FILMIBEAT
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm