ಬ್ರೇಕಿಂಗ್ ನ್ಯೂಸ್
02-04-21 11:22 am Source: FILMIBEAT Shruthi Gk ಸಿನಿಮಾ
ಏ.02: ಬಾಲಿವುಡ್‌ನ ಖ್ಯಾತ ನಟಿ ಅಲಿಯಾ ಭಟ್ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚಿಗಷ್ಟೆ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದರ ಬೆನ್ನಲ್ಲೇ ಈಗ ಅಲಿಯಾಗೂ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಬಗ್ಗೆ ಅಲಿಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಕೊರೊನಾ ಪಾಸಿಟಿವ್ ವರದಿ ಬಂದಿದೆ, ಮನೆಯಲ್ಲಿ ಕ್ವಾರಂಟೈನ್ ಆಗಿರುವುದಾಗಿ ಹೇಳಿದ್ದಾರೆ. 'ನನಗೆ ಕೋವಿಡ್ 19 ಪಾಸಿಟಿವ್ ಬಂದಿದೆ. ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೀನಿ. ವೈದ್ಯರ ಸಲಹೆ ಮೇರೆಗೆ ನಾನು ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಬೆಂಬಲಕ್ಕೆ ಧನ್ಯವಾದಗಳು' ಎಂದು ಬರೆದುಕೊಂಡಿದ್ದಾರೆ.
ಕಳೆದ ಎರಡು ವಾರದ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ನಟ ರಣಬೀರ್ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ರಣಬೀರ್ ಚೇತರಿಸಿಕೊಂಡಿದ್ದಾರೆ. ಅಲಿಯಾ ಸದ್ಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕೂಡ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ ಚಿತ್ರೀಕರಣವನ್ನು ಮುಂದೂಡಲಾಗಿತ್ತು.
ಇದೀಗ ನಾಯಕಿ ಅಲಿಯಾಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದರಿಂದ ಚಿತ್ರೀಕರಣ ಮತ್ತೆ ಮುಂದೂಡಲಾಗಿದೆ. ಅಲಿಯಾ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸ್ನೇಹಿತರು ಹಾರೈಸುತ್ತಿದ್ದಾರೆ. ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲೂ ಭಾಗಿಯಾಗಬೇಕಿದೆ. ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕೊರೊನಾ ಎರಡನೇ ಅಲೆಯಲ್ಲಿ ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಿನಿಮಾ ಶೂಟಿಂಗ್, ಪ್ರಮೋಷನ್ ಜೊತೆಗೆ ಆರೋಗ್ಯದ ಕಡೆಯೂ ಎಚ್ಚರಿಕೆ ವಹಿಸಲಿ ಎನ್ನುವುದು ಎಲ್ಲರ ಆಶಯ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm