ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm