ಬ್ರೇಕಿಂಗ್ ನ್ಯೂಸ್
28-04-21 05:58 pm Source: FILMIBEAT ಸಿನಿಮಾ
ಕನ್ನಡ ಚಿತ್ರರಂಗದಲ್ಲಿ ಮೇಕಪ್ ಸೀನಣ್ಣ ಎಂದೇ ಖ್ಯಾತಿಗಳಿಸಿದ್ದ ಮೇಕಪ್ ಕಲಾವಿದ ಶ್ರೀನಿವಾಸ್ ಇಂದು (ಏಪ್ರಿಲ್ 28) ಕೊನೆಯುಸಿರೆಳೆದಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳುತ್ತಿದ್ದ ಶ್ರೀನಿವಾಸ್ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅನೇಕ ವರ್ಷಗಳಿಂದ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಅವರು ಅನೇಕ ಖ್ಯಾತ ಕಲಾವಿದರಿಗೆ ಬಣ್ಣ ಹಚ್ಚಿದ್ದಾರೆ. ಸದ್ಯ ಶ್ರೀನಿವಾಸ್ ಅವರು ವರ್ಣಾಲಂಕಾರ ಮತ್ತು ಕೇಶಲಂಕಾರ ಕಲಾವಿದರ ಸಂಘದ ಉಪಾಧ್ಯಕ್ಷರಾಗಿದ್ದರು.
ಸೀನಣ್ಣ ನಿರ್ದೇಶಕ ಚೇತನ್ ಕುಮಾರ್ ಸಾರಥ್ಯ ಬಹದ್ದೂರ್, ಭರ್ಜರಿ, ಭರಾಟೆ ಮತ್ತು ಇನ್ನು ಅನೇಕ ಸಿನಿಮಾಗಳಿಗೆ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾಗೂ ಮೇಕಪ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅನೇಕ ಯುವ ನಿರ್ದೇಶಕರ ಸಿನಿಮಾಗಳಿಗೆ ಸೀನಣ್ಣ ಕೆಲಸ ಮಾಡಿದ್ದಾರೆ.
ಸೀನಣ್ಣ ನಿಧನಕ್ಕೆ ನಿರ್ದೇಶಕ ಚೇತನ್ ಸಂತಾಪ ಸೂಚಿಸಿದ್ದಾರೆ. 'ನಮ್ಮ ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಚಿತ್ರಗಳಿಗೆ ಹಾಗೂ ಕನ್ನಡದ ಬಹಳಷ್ಟು ಚಿತ್ರಗಳಿಗೆ ಕಂಪೆನಿ ಮೇಕಪ್ ಮ್ಯಾನ್ ಆಗಿ (ವರ್ಣಾಲಂಕಾರ) ಕಾರ್ಯನಿರ್ವಹಿಸಿದ "ಮೇಕಪ್ ಸೀನಣ್ಣ" (ಶ್ರೀನಿವಾಸ್) ರವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ ಅಣ್ಣ' ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ನಿರ್ದೇಶಕ ಎಪಿ ಅರ್ಜುನ್ ಟ್ವೀಟ್ ಮಾಡಿ. 'ನನ್ನ ಎಲ್ಲಾ ಸಿನಿಮಾಗಳಿಗೂ makeup ಕಲಾವಿದರಾಗಿ ಕೆಲಸ ನಿರ್ವಹಿಸುತ್ತಿದ್ದ ಸೀನಣ್ಣ ಇಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ. ಒಂದು ವಾರದ ಹಿಂದೆ ನಗುನಗುತ್ತಾ ಬಂದು ಭೇಟಿಯಾಗಿದ್ದ ವ್ಯಕ್ತಿ ಇಂದು ಇಲ್ಲ ಎಂದರೆ ನಿಜವಾಗಿಯೂ ನಂಬಲಾಗುತ್ತಿಲ್ಲ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸೀನಣ್ಣ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm