ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್‌ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್‌ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್‌ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm