ಬ್ರೇಕಿಂಗ್ ನ್ಯೂಸ್
03-05-21 11:15 am Source: FILMIBEAT Shruthi Gk ಸಿನಿಮಾ
ದೇಶದಲ್ಲಿ ಕೊರೊನಾ ಮಹಾಮಾರಿ ಸಾವಿರಾರು ಜನರನ್ನು ಬಲಿ ಪಡೆಯುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡುತ್ತಿದ್ದಾರೆ. ಚಿತ್ರರಂಗದ ಅನೇಕ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಟಿವಿ ಖ್ಯಾತ ನಿರೂಪಕಿ ಮತ್ತು ನಟಿ ಕನುಪ್ರಿಯಾ ಕೊರೊನಾಗೆ ಬಲಿಯಾಗಿದ್ದಾರೆ. ಬ್ರಹ್ಮ ಕುಮಾರಿಸ್ ಮತ್ತು ಕರ್ಮಭೂಮಿ ಕಾರ್ಯಕ್ರಮಗಳನ್ನು ಹೋಸ್ಟ್ ಮಾಡುವ ಮೂಲಕ ಕನುಪ್ರಿಯಾ ಪ್ರಸಿದ್ಧಿಗಳಿಸಿದ್ದರು. ನಿರೂಪಕಿಯಾಗಿ, ನಟಿಯಾಗಿ ಮತ್ತು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದರು.
ಈ ವಿಚಾರವನ್ನು ಕನುಪ್ರಿಯಾ ಸಹೋದರಿ ಬಿ.ಕೆ ಶಿವಾನಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಳಿಕ ಕನುಪ್ರಿಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕನುಪ್ರಿಯಾ ನಡೆಸಿಕೊಡುತ್ತಿದ್ದ ಕರ್ಮಭೂಮಿ ಕಾರ್ಯಕ್ರಮ ಯುವ ನಾಯಕತ್ವವನ್ನು ಕೇಂದ್ರಿಕರಿಸಿತ್ತು. ನಾಯಕತ್ವ, ಸ್ವಯಂ ಸುಧಾರಣೆ, ನಿರ್ಧಾರ ತೆಗೆದುಕೊಳ್ಳುವುದು ಹೀಗೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ರಮವಾಗಿತ್ತು.
ನಟಿಯಾಗಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಕನುಪ್ರಿಯಾ 80ಕ್ಕೂ ಹೆಚ್ಚು ಧಾರಾವಾಹಿ, 50 ಟೆಲಿಫಿಲ್ಮ್ ಗಳಲ್ಲಿ ನಟಿಸಿದ್ದಾರೆ. ಭನ್ವಾರ್, ಕಹಿ ಏಕ್ ಗಾಂವ್, ಮೇರಿ ಕಹಾನಿ, ಕರ್ತವ್ಯ, ತೆಸು ಕೆ ಫೂಲ್ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm