ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm