ಬ್ರೇಕಿಂಗ್ ನ್ಯೂಸ್
14-06-21 04:36 pm Source: Public Tv Kannada ಸಿನಿಮಾ
ಬೆಂಗಳೂರು, ಜೂನ್ 14: ಕಳೆದ ವರ್ಷ ಜೂನ್ 14ರಂದು ಬಾಲಿವುಡ್‍ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದ ಸುದ್ದಿ ಪ್ರಕಟವಾಗಿದ್ದರೆ, ಇಂದು ಸಂಚಾರಿ ವಿಜಯ್ ಅಪಘಾತಕ್ಕೀಡಾಗಿ ನಿಧನಹೊಂದಿದ್ದಾರೆ. ಈ ಮೂಲಕ ಇಬ್ಬರು ಪ್ರತಿಭಾನ್ವಿತ ನಟರು ಒಂದು ವರ್ಷದಲ್ಲಿ ಕಲಾ ಬದುಕಿನಿಂದ ದೂರವಾಗಿದ್ದಾರೆ.
ಕಾಕತಾಳೀಯವೆಂಬಂತೆ ಒಂದೇ ವರ್ಷದ ಅಂತರದಲ್ಲಿ ಇಬ್ಬರು ಪ್ರತಿಭಾನ್ವಿತ ನಟರು ಒಂದೇ ದಿನದಂದು ಮೃತಪಟ್ಟಿರುವುದರ ಬಗ್ಗೆ ಇದೀಗ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಸ್ಯಾಂಡಲ್‍ವುಡ್ ನಟ-ನಟಿಯರು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ ಆರೋಗ್ಯ ಸಚಿವರಾದ ಡಾ. ಸುಧಾಕರ್, ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ. ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್‍ನಲ್ಲಿ ಹೊಸ ಬಗೆಯ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದರು. ಖ್ಯಾತ ಕ್ರಿಕೆಟಿಗ ಎಂ.ಎಸ್ ಧೋನಿ ಅವರ ಬಯೋಪಿಕ್‍ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲರ ಮನಗೆದ್ದಿದ್ದ ಸುಶಾಂತ್, 2020 ಜೂನ್ 14 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಇಬ್ಬರು ಚಿತ್ರರಂಗದಲ್ಲಿ ಇನ್ನಷ್ಟೂ ಸಾಧನೆ ಮಾಡುವ ಹೊತ್ತಿನಲ್ಲಿ ವಿಧಿಯ ಬರಹಕ್ಕೆ ಬಲಿಯಾಗಿದ್ದಾರೆ.
(Kannada Copy of Public TV)
ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ.
— Dr Sudhakar K (@mla_sudhakar) June 14, 2021
ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/e9jq0ytXe8
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm