ಬ್ರೇಕಿಂಗ್ ನ್ಯೂಸ್
16-06-21 04:21 pm Source: Vijaya Karnataka ಸಿನಿಮಾ
ಬೆಂಗಳೂರು: ಅರ್ಧದಲ್ಲೇ ನಿಂತಿದ್ದ ಬಿಗ್‍ಬಾಸ್ ಮತ್ತೆ ಪ್ರಾರಂಭವಾಗಲಿದೆ. ಬಿಗ್‍ಬಾಸ್ ಪ್ರಸಾರವಾಗುವ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಮಾಹಿತಿಯನ್ನು ನೀಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಪರಮೇಶ್ವರ್ ಗುಂಡ್ಕಲ್ ಹೇಳಿದ್ದು ಹೀಗಿದೆ
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.


ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು..
ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ.
(Kannada Copy of Vijayakarnataka)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm