ಬ್ರೇಕಿಂಗ್ ನ್ಯೂಸ್
24-08-21 11:01 am Filmbeat: Manjunatha C ಸಿನಿಮಾ
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ಸಂನಜಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಅವರುಗಳ ಎಫ್‌ಎಸ್‌ಎಲ್ ವರದಿ ಇದೀಗ ಬಂದಿದ್ದು ಈ ನಟಿಯರು ಡ್ರಗ್ಸ್ ಸೇವಿಸಿದ್ದು ಖಾತ್ರಿಯಾಗಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಸಂಜನಾ, ರಾಗಿಣಿ, ವೀರೇನ್ ಇನ್ನೂ ಹಲವರ ತಲೆ ಕೂದಲು ಮಾದರಿಯನ್ನು ಪಡೆದಿದ್ದ ಪೊಲೀಸರು ಅದನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ರವಾನಿಸಿದ್ದು ಅದರ ವರದಿ ಇದೀಗ ಬಂದಿದ್ದು ಸಂಜನಾ ಗಲ್ರಾನಿ, ರಾಗಿಣಿ ದ್ವೀವೇದಿ, ವೀರೆನ್ ಡ್ರಗ್ಸ್ ಸೇವಿಸಿದ್ದು ಖಾತ್ರಿಯಾಗಿದೆ.
ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವೀರೆನ್ ಖನ್ನಾ, ಆದಿತ್ಯ ಆಳ್ವಾ ಸೇರಿ ಇನ್ನೂ ಹಲವು ಮಂದಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿತರು ಡ್ರಗ್ಸ್ ಸೇವಿಸಿದ್ದಾರೆಯೇ ಇಲ್ಲವೆ ಎಂದು ಅರಿಯಲು ಅವರತಲೆ ಕೂದಲು, ಮೂತ್ರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.

ಈ ಹಿಂದೆಯೂ ಒಮ್ಮೆ ತಲೆ ಕೂದಲು ಮಾದರಿಯನ್ನು ಎಫ್‌ಎಸ್‌ಎಲ್ ಪ್ರಯೋಗಾಲಯಕ್ಕೆ ಹೈದರಾಬಾದ್‌ಗೆ ಕಳುಹಿಸಲಾಗಿತ್ತು ಆದರೆ ಸಂಗ್ರಹಿಸಿರುವ ಮಾದರಿ ಸೂಕ್ತವಾಗಿಲ್ಲವೆಂದು ವರದಿ ಬಂದಿತ್ತು. ನಟಿ ರಾಗಿಣಿ ಮೂತ್ರ ವಿಸರ್ಜನೆದ ಮಾದರಿಗೆ ನೀರು ಬೆರೆಸಿದ್ದಾರೆ. ಬೇರೆಯವರ ತಲೆಕೂದಲು ಮಾದರಿ ನೀಡಿದ್ದಾರೆ ಎಂಬ ಆರೋಪಗಳು ಆಗ ಕೇಳಿ ಬಂದಿದ್ದವು. ನಂತರ ಮತ್ತೊಮ್ಮೆ ತಲೆ ಕೂದಲು ಮಾದರಿ ಸಂಗ್ರಹಿಸಿ ಎಫ್‌ಎಸ್‌ಎ
ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಇಬ್ಬರೂ ಡ್ರಗ್ಸ್ ಸೇವಿಸಿರುವುದು ವರದಿಯಿಂದ ಖಾತ್ರಿಯಾಗಿದ್ದು, ಇದರ ಆಧಾರದ ಮೇಲೆ ಸಿಸಿಬಿ ಪೊಲೀಸರು ನಟಿಯರ ಜಾಮೀನು ರದ್ದು ಮಾಡುವಂತೆ ನ್ಯಾಯಾಲಯವನ್ನು ಕೋರುವ ಸಾಧ್ಯತೆ ಇದೆ. ಜೊತೆಗೆ ನಟಿಯರಿಬ್ಬರಿಗೂ ಡ್ರಗ್ಸ್ ಪ್ರಕರಣ ಇನ್ನಷ್ಟು ಕಠಿಣವಾಗುವ ಸಾಧ್ಯತೆ ಇದೆ. ಡ್ರಗ್ಸ್ ಸೇವನೆ ಮತ್ತು ಮಾರಾಟಕ್ಕೆ ಸಹಾಯದ ಆರೋಪವನ್ನು ನಟಿಯರ ಮೇಲೆ ಸಿಸಿಬಿ ಪೊಲೀಸರು ಹೊರಿಸಿದ್ದಾರೆ.
2020ರ ಸೆಪ್ಟೆಂಬರ್ 4ರಂದು ನಗರದ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವೀವೇದಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದರು. ಇದಾದ ನಾಲ್ಕು ದಿನಗಳ ಬಳಿಕ ಸೆಪ್ಟೆಂಬರ್ 8ರಂದು ಸಂಜನಾ ಗಲ್ರಾನಿಯನ್ನು ಬಂಧಿಸಲಾಯಿತು. ಆ ನಂತರ ರಾಹುಲ್, ವೀರೇನ್ ಖನ್ನಾ, ಆದಿತ್ಯ ಆಳ್ವಾ, ರಾಗಿಣಿ ಆಪ್ತ ರವಿಕುಮಾರ್, ಶಿವಪ್ರಕಾಶ್ ಇನ್ನೂ ಹಲವಾರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸಂಜನಾ ಹಾಗೂ ರಾಗಿಣಿ ಇಬ್ಬರೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧಿಗಳಾಗಿ ಎರಡು ತಿಂಗಳಿಗೂ ಹೆಚ್ಚು ದಿನ ಕಾಲ ಕಳೆಯಬೇಕಾಯಿತು. ರಾಗಿಣಿ 140 ದಿನಗಳ ಕಾಲ ಜೈಲಿನಲ್ಲಿದ್ದರೆ ಸಂಜನಾ ಗಲ್ರಾನಿ 85 ದಿನ ಜೈಲಿನಲ್ಲಿದ್ದರು.

ಇಬ್ಬರೂ ಜಾಮೀನಿನ ಮೇಲೆ ಹೊರಗಿದ್ದು ಪ್ರಕರಣದ ವಿಚಾರಣೆಗಳಿಗೆ ಹಾಜರಾಗುತ್ತಿದ್ದಾರೆ. ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 20 ಕ್ಕೂ ಹೆಚ್ಚು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ಶಿವಪ್ರಕಾಶ್, ವೀರೇನ್ ಖನ್ನಾ, ಆದಿತ್ಯ ಆಳ್ವಾ, ವೈಭವ್ ಜೈನ್, ವಿನಯ್ ಕುಮಾರ್, ರಾಹುಲ್ ಟೊನ್ಸೆ, ಲೂಮ್ ಪೆಪ್ಪರ್, ಪ್ರಶಾಂತ್ ರಾಜ್, ಅಭಿಸ್ವಾಮಿ, ಮೊಹಮ್ಮದ್ ಮೆಸ್ಸಿ, ಎ ವಿನೋದ್ ಹಾಗೂ ಕೆಲವು ವಿದೇಶಿ ಪ್ರಜೆಗಳನ್ನು ಸಹ ಸಿಸಿಬಿ ಪೊಲೀಸರು ಬಂಧಿಸಿದ್ದರು.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm