ಬ್ರೇಕಿಂಗ್ ನ್ಯೂಸ್
01-09-21 03:24 pm Filmbeat Kannada ಸಿನಿಮಾ
ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮುಂಬೈನ ಹಿಂದುಜಾ ಆಸ್ಪತ್ರೆಗೆ ಸೈರಾ ಬಾನು ಅವರನ್ನು ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸೈರಾ ಬಾನು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಕಳೆದ 3 ದಿನಗಳ ಹಿಂದೆಯೇ ಸೈರಾ ಬಾನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು (ಸೆಪ್ಟಂಬರ್ 1) ಐ ಸಿ ಯುಗೆ ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇತ್ತೀಚಿಗಷ್ಟೆ ಸೈರಾ ಬಾನು ಪ್ರೀತಿಯ ಪತಿ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದರು. ಪತಿಯ ಅಗಲಿಕೆಯ ನೋವಿನಲ್ಲಿದ್ದ ಸೈರಾ ಈಗ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವುದು ಸ್ನೇಹಿತರಲ್ಲಿ ಆತಂಕ ಮನೆ ಮಾಡಿದೆ. ಸೈರಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಅವರ ಕುಟುಂಬದವರಾಗಲಿ ಅಥವಾ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

ನಟ ದಿಲೀಪ್ ಕುಮಾರ್ ವಯೋಸಹಜ ಕಾಯಿಲೆಯಿಂದ ಜುಲೈ 7ರಂದು ನಿಧನ ಹೊಂದಿದರು. 98 ವರ್ಷದ ನಟ ದಿಲೀಪ್ ಅನಾರೋಗ್ಯದ ಕಾರಣ ಆಗಾಗ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 7ರಂದು ಕೊನೆಯುಸಿರೆಳೆದರು. ಸೈರಾ ಬಾನು ಮತ್ತು ದಿಲೀಪ್ ಇಬ್ಬರದ್ದು ಪ್ರೇಮ ವಿವಾಹ. ಇಬ್ಬರೂ ಮದುವೆಯಾಗಿ 54 ವರ್ಷಗಳು ಕಳೆದಿವೆ. ಇಬ್ಬರ ಪ್ರೇಮ ಕಥೆ ಬಾಲಿವುಡ್ ನಲ್ಲಿ ಮರೆಯಲಾಗದ ಪ್ರೇಮಕಥೆಯಾಗಿದೆ.
ಕೊನೆಯದಾಗಿ ಸೈರಾ ಬಾನು ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಪತಿ ಆರೋಗ್ಯದ ಬಗ್ಗೆ ಮಾತನಾಡಿದ್ದರು. ದಿಲೀಪ್ ಕುಮಾರ್ ಆರೋಗ್ಯ ತೀರ ಹದಗೆಟ್ಟಿದೆ ಎಂದು ಹೇಳಿದ್ದರು. "ಅವರ ಆರೋಗ್ಯ ತುಂಬಾ ಹದಗೆಟ್ಟಿದೆ. ತುಂಬಾ ದುರ್ಬಲ ಆಗಿದ್ದಾರೆ. ಮನೆಯೊಳಗೆ ಮಾತ್ರ ಓಡಾಡುತ್ತಾರೆ. ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ" ಎಂದು ಹೇಳಿದ್ದರು. ಜೊತೆಗೆ ಪತಿಯನ್ನು ಹಾಡಿ ಹೊಗಳಿದ್ದರು. ಇದೀಗ ಸ್ವತಃ ಸೈರಾ ಅವರೇ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈರಾ ಬೇಗ ಗುಣಮುಖರಾಗಲಿ ಎಂದು ಸ್ನೇಹಿತರು, ಚಿತ್ರರಂಗದ ಗಣ್ಯರು ಹಾರೈಸುತ್ತಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm