ಬ್ರೇಕಿಂಗ್ ನ್ಯೂಸ್
04-09-21 11:19 am Source: News18 Kannada ಸಿನಿಮಾ
ಜನಪ್ರಿಯ ನಿರ್ದೇಶಕ ಪೊನ್ನಿಯಿನ್ ಸೆಲ್ವನ್ (Ponniyin Selvan) ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ಕುದರೆಯೊಂದು ಸಾವನ್ನಪ್ಪಿದೆ. ಈ ಬಗ್ಗೆ ಹೈದರಾಬಾದ್ನಲ್ಲಿ ಕುದುರೆಯ ಮಾಲೀಕ, ಸಿನಿಮಾ ನಿರ್ಮಾಣ ಸಂಸ್ಥೆ ಹಾಗೂ ಚಿತ್ರತಂಡದ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಿನಿಮಾಗಳಲ್ಲಿ ಪ್ರಾಣಿ-ಪಕ್ಷಿಗಳನ್ನು ಬಳಕೆ ಮಾಡುವುದು ತುಂಬಾ ಸಮಯದಿಂದ ನಡೆದುಕೊಂಡು ಬರುತ್ತಲೇ ಇದೆ. ಇನ್ನು ಈ ಹಿಂದೆ ಸಿನಿಮಾ ಚಿತ್ರೀಕರಣದ ವೇಳೆ ಪ್ರಾಣಿಗಳ ಜೀವಕ್ಕೆ ಕುತ್ತಾಗಿರುವ ಘಟನೆಗಳೂ ಸಾಕಷ್ಟು ನಡೆದಿದೆ. ಈ ಕಾರಣಕ್ಕೆ ಈ ಸಂಬಂಧ ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸಲಾಯಿತು. ಆಗಿನಿಂದ ಸಿನಿಮಾ ಚಿತ್ರೀಕರಣಗಳಲ್ಲಿ ಪ್ರಾಣಿ-ಪ್ಕಷಿಗಳನ್ನು ಬಳಸುವುದಾದರೆ ಮನುಷ್ಯರಂತೆಯೇ ಅವುಗಳ ಜೀವಕ್ಕೂ ಅಪಾಯವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದು ಆಯಾ ಚಿತ್ರತಂಡದ ಕರ್ತವ್ಯವಾಗಿರುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಪ್ರಾಣಿಗಳ ಜೀವಕ್ಕೆ ಕುತ್ತು ಎದುರಾಗುತ್ತದೆ. ಕಾಲಿವುಡ್ನ ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಅವರು ನಿರ್ದೇಶನ ಮಾಡುತ್ತಿರುವ ಪೊನ್ನಿಯಿನ್ ಸೆಲ್ವನ್ (Ponniyin Selvan) ಸಿನಿಮಾದ ಶೂಟಿಂಗ್ನಲ್ಲೂ ಇಂತಹದ್ದೇ ಘಟನೆಯೊಂದು ನಡೆದಿದೆ.

ಜನಪ್ರಿಯ ನಿರ್ದೇಶಕ ಪೊನ್ನಿಯಿನ್ ಸೆಲ್ವನ್ (Ponniyin Selvan) ಸಿನಿಮಾದ ಚಿತ್ರೀಕಣರ ನಡೆಯುತ್ತಿದೆ. ಈ ವೇಳೆ ಕುದರೆಯೊಂದು ಸಾವನ್ನಪ್ಪಿದೆ. ಈ ಬಗ್ಗೆ ಹೈದರಾಬಾದ್ನಲ್ಲಿ ಕುದುರೆಯ ಮಾಲೀಕ, ಸಿನಿಮಾ ನಿರ್ಮಾಣ ಸಂಸ್ಥೆ ಹಾಗೂ ಚಿತ್ರತಂಡದ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಿನಿಮಾ ಚಿತ್ರೀಕರಣ ಕಳೆದ ಕೆಲವು ದಿನಗಳ ನಡೆಯುತ್ತಿದೆ. ಆಗಸ್ಟ್ 11ರಂದು ಕುದುರೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಆಗಸ್ಟ್ 18ರಂದು ಎಫ್ಐಆರ್ ದಾಖಲಾಗಿದೆ. ಈ ಪ್ರಕರಣ ಬೆಳಕಿಗೆ ಬಂದಿದ್ದು ಮಾತ್ರ ನಿನ್ನೆ ಅಂದರೆ ಸೆ. 2ರಂದು. ದ ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ (AWBI) ಕುದುರೆ ಸಾವಿನ ಕುರಿತಾಗಿ ತನಿಖೆ ನಡೆಸಿ ವರದಿ ನೀಡುವಂತೆ ಹೈದರಾಬಾದ್ನ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದೆ. ಜೊತೆಗೆ ತಪ್ಪುತಸ್ಥರಿಗೆ ಸೂಕ್ತವಾದ ಶಿಕ್ಷೆ ಆಗುವಂತೆ ಮಾಡಬೇಕೆಂದು ಆಗ್ರಹಿಸಿದೆ.

ಸಿನಿಮಾದಲ್ಲಿ ಯುದ್ಧ ನಡೆಯುವ ದೃಶ್ಯಗಳ ಚಿತ್ರೀಕರಣಕ್ಕಾಗಿ ಕುದುರೆಗಳನ್ನು ಬಳಸಲಾಗುತ್ತಿದ್ದು, ಶೂಟಿಂಗ್ ಮಾಡುವ ವೇಳೆ ಕುದುರೆ ಕೆಳಗೆ ಬಿದ್ದು ಪೆಟ್ಟಾಗಿ ಅಸುನೀಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ಆಗಬೇಕಿದೆ. ಪೇಟಾ ಹೇಳಿರುವಂತೆ ಸುಸ್ತಾಗಿರುವ ಕುದುರೆಗಳನ್ನು ಸತತವಾಗಿ ಬಿಸಿಲಿನಲ್ಲಿ ಶೂಟಿಂಗ್ನಲ್ಲಿ ಬಳಸಿಕೊಂಡ ಕಾರಣದಿಂದ ಡಿಹೈಡ್ರೇಷನ್ ಆಗಿ ಕುದುರೆ ಸಾವನ್ನಪ್ಪಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಸಿನಿಮಾಗಳಲ್ಲಿ ಪ್ರಾಣಿಗಳನ್ನು ಬಳಸಿಕೊಳ್ಳಲು ಕಠಿಣ ನಿಯಮಗಳಿವೆ. ಹಾಗಾಗಿಯೇ ಚಿತ್ರತಂಡಗಳು ಪ್ರಾಣಿಗಳ ಬದಲಾಗಿ ಸಿಜಿಐ ಅಥವಾ ಇತರೆ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಾರೆ. ಇದು ಪೌರಾಣಿಕ ಕಥಾಹಂದರ ಹೊಂದಿರುವ ಸಿನಿಮಾ ಆಗಿದ್ದು, ಯುದ್ಧದ ಸನ್ನಿವೇಶಗಳು ತುಂಬಾ ಇವೆ. ಹೀಗಾಗಿಯೇ ಕುದುರೆಗಳನ್ನು ಬಳಸಲಾಗಿದೆಯಂತೆ.
ತಮಿಳಿನ ಖ್ಯಾತ ನಿರ್ದೇಶಕ ಮಣಿರತ್ನಂ ಆ್ಯಕ್ಷನ್ ಕಟ್ ಹೇಳುತ್ತಿರುವ ಪೊನ್ನಿಯಿನ್ ಸೆಲ್ವನ್ ಚಿತ್ರದ ಮೂಲಕ 47 ವರ್ಷದ ಐಶ್ವರ್ಯ ರೈ ಬಚ್ಚನ್ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಬಚ್ಚನ್ 4 ವರ್ಷಗಳ ನಂತರ ಮತ್ತೆ ಬಿಗ್ ಸ್ಕ್ರೀನ್ಗೆ ಮರಳಲು ರೆಡಿಯಾಗಿದ್ದಾರೆ. ಬರೋಬ್ಬರಿ 12 ವರ್ಷಗಳ ಬಳಿಕ ತಮಿಳು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm