ಬ್ರೇಕಿಂಗ್ ನ್ಯೂಸ್
20-09-21 04:36 pm Headline Karnataka News Network ಸಿನಿಮಾ
ಚಿತ್ರರಂಗ ಅಲ್ಲದೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕವೂ ಗುರುತಿಸಿಕೊಂಡಿರುವ ನಟಿ ಪ್ರಣೀತಾ ಕೊವೀಡ್ ಎರಡನೆ ಅಲೆಯ ವೇಳೆಯಲ್ಲೂ ಜನರಿಗೆ ನೆರವಾಗಿದ್ದಾರೆ. ತಮ್ಮ ಫೌಂಡೇಶನ್ ವತಿಯಿಂದ ಲಸಿಕೆ ಅಭಿಯಾನ ನಡೆಸಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಹಲವರು ಈ ಅಭಿಯಾನದಲ್ಲಿ ಲಸಿಕೆ ಪಡೆದುಕೊಂಡಿದ್ದು, ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನರು ಪ್ರಣೀತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿಮಾನಿಗಳು ಪೋಟೋ ಶೇರ್ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೋತ್ಥಾನ ಪರಿಷತ್ ಜೊತೆ ಕೈಜೋಡಿಸಿದ ನಟಿ ಪ್ರಣಿತಾ, ತಮ್ಮ ಫೌಂಡೇಶನ್ ಸಹಯೋಗದೊಂದಿಗೆ ಜನರಿಗೆ ಉಚಿತವಾಗಿ ಲಸಿಕೆ ವಿತರಿಸಿದ್ದಾರೆ. ಜಯನಗರದಲ್ಲಿ ಪ್ರಣೀತಾ ಪೌಂಡೇಶನ್ ಹಾಗೂ ರಾಷ್ಟ್ರೋತ್ಥಾನ ಪರಿಷತ್ ಉಚಿತವಾಗಿ ಲಸಿಕೆ ವಿತರಣೆ ಹಮ್ಮಿಕೊಂಡಿದೆ.
ಈ ಹಿಂದೆ ವಿಷ್ಣುವರ್ಧನ್ ಓದಿದ ಶಾಲೆ ಶಾಶ್ವತವಾಗಿ ಮುಚ್ಚಿಹೋಗುವ ಸಂಗತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪ್ರಣೀತಾ ಶಾಲೆ ಉಳಿಸಲು ನೆರವಾಗಿದ್ದರು. ಇದು ಮಾತ್ರವೇ ಅಲ್ಲದೆ ಹಲವು ಜನಪರ ಕಾರ್ಯಕ್ರಮಗಳಲ್ಲಿ ಪ್ರಣಿತಾ ತಮ್ಮನ್ನು ತಾವು ತೊಡಿಗಿಸಿಕೊಂಡಿದ್ದಾರೆ.
ಈ ಹಿಂದೆ ಜೂನ್ ತಿಂಗಳಲ್ಲಿ ತಮ್ಮ ಫೌಂಡೇಶನ್‌ನಿಂದ ಸ್ವತಂತ್ರ್ಯವಾಗಿ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ಪ್ರಣಿತಾ ಹಮ್ಮಿಕೊಂಡಿದ್ದರು.
ಪ್ರಸ್ತುತ ಸಾಮಾಜಿಕ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ನಿರ್ಭಿಡೆಯಿಂದ ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ ಪ್ರಣಿತಾ ಸುಭಾಷ್, ಕೆಲವು ದಿನಗಳ ಹಿಂದಷ್ಟೆ 'ಹಿಂದೂ ಭಯೋತ್ಪಾದನೆ' ಎಂದವರ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದ ನಟಿ ಪ್ರಣಿತಾ, ''ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ಉದಾಹರಣೆಯಾಗಿ ನೀಡುತ್ತಾ 'ಹಿಂದೂ ಭಯೋತ್ಪಾದನೆ' ವಾದವನ್ನು ಕೆಲವರು ಮುಂದಿಡುತ್ತಿದ್ದಾರೆ. 'ಹಿಂದು ಭಯೋತ್ಪಾದನೆ' ಎಂಬ ತಮ್ಮ ಕಲ್ಪನೆಯನ್ನು ಸಾರ್ವಜನಿಕಗೊಳಿಸುವ ಯತ್ನ ಮಾಡುತ್ತಿದ್ದಾರೆ. ಭಾರತ ದೇಶವು ಎಚ್ಚರಿಕೆಯಿಂದರಬೇಕು, ವೈರಿಗಳು ದೇಶದ ಗಡಿಗಳ ಹೊರಗೆ ಮಾತ್ರವೇ ಇಲ್ಲ ದೇಶದ ಒಳಗೂ ಇದ್ದಾರೆ'' ಎಂದಿದ್ದರು. ಪ್ರಣಿತಾರ ಈ ಟ್ವೀಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರಿಂದ, ಆರ್‌ಎಸ್‌ಎಸ್ ಬೆಂಬಲಿಗರಿಂದ ಭಾರಿ ಬೆಂಬಲ ವ್ಯಕ್ತವಾಗಿತ್ತು.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm