ಬ್ರೇಕಿಂಗ್ ನ್ಯೂಸ್
22-09-21 10:39 am Filmbeat: Manjunatha C ಸಿನಿಮಾ
ಗೆಳೆಯನೊಂದಿಗೆ ಜಾಲಿ ಟ್ರಿಪ್ ಹೊರಟಿದ್ದ ಯುವನಟಿ ಅಪಘಾತದಲ್ಲಿ ದಾರುಣ ಸಾವಿಗೀಡಾಗಿರುವ ಘಟನೆ ಮರಾಠಿ ಚಿತ್ರರಂಗವನ್ನು ಶೋಕಕ್ಕೆ ನೂಕಿದೆ.
ಮರಾಠಿ ನಟಿ ಈಶ್ವರ್ ದೇಶ್‌ಪಾಂಡೆ ಕಳೆದ ವಾರ ತಮ್ಮ ಬಾಯ್‌ಫ್ರೆಂಡ್ ಶುಭಂ ದಾದ್ಗೆ ಜೊತೆಗೆ ಗೋವಾಕ್ಕೆ ಜಾಲಿ ಟ್ರಿಪ್ ಹೋಗಿದ್ದರು. ಅಲ್ಲಿಂದ ಹಲವು ಕಡೆ ಕಾರಿನಲ್ಲಿಯೇ ಪ್ರವಾಸ ಮಾಡುತ್ತಿದ್ದರು, ಕಾರು ಗೋವಾದ ಬಾಗಾ ನದಿಗೆ ಬಿದ್ದ ಪರಿಣಾಮ ಈಶ್ವರಿ ಹಾಗೂ ಶುಭಂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ನೀರಿಗೆ ಬಿದ್ದಾಗ ಕಾರು ಸೆಂಟ್ರಲ್ ಲಾಕ್ ಆಗಿದ್ದ ಕಾರಣ ಇಬ್ಬರೂ ಸಹ ಕಾರಿನಿಂದ ಹೊರಗೆ ಬರಲು ಆಗದೆ ಅಲ್ಲಿಯೇ ಉಸಿರುಗಟ್ಟಿ ಅಸುನೀಗಿದ್ದಾರೆ. ಕಾರನ್ನು ನದಿಯಿಂದ ಮೇಲಕ್ಕೆತ್ತಲಾಗಿದ್ದು, ಮೃತ ದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
25 ವರ್ಷ ವಯಸ್ಸಿನ ನಟಿ ಈಶ್ವರಿ ನಟನೆ ಬಗ್ಗೆ ಬಹಳ ಆಸಕ್ತಿ ಹೊಂದಿದ್ದರು. ಮರಾಠಿ ಮತ್ತು ಹಿಂದಿ ಸಿನಿಮಾದ ಚಿತ್ರೀಕರಣವನ್ನು ಕಳೆದ ವಾರವಷ್ಟೆ ಅವರು ಮುಗಿಸಿದ್ದರು. ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಬಾಯ್‌ಫ್ರೆಂಡ್ ಜೊತೆಗೆ ಗೋವಾಕ್ಕೆ ತೆರಳಿದ್ದರು. ಅಲ್ಲದೆ ತಮ್ಮ ಬಾಯ್‌ಫ್ರೆಂಡ್ ಶುಭಂ ಜೊತೆಗೆ ಮುಂದಿನ ತಿಂಗಳು ಎಂಗೇಜ್‌ಮೆಂಟ್ ಸಹ ಮಾಡಿಕೊಳ್ಳುವವರಿದ್ದರು ಈಶ್ವರಿ.

ಈಶ್ವರಿ ನಟಿಸಿದ್ದ ಎರಡು ಸಿನಿಮಾಗಳು ಬಿಡುಗಡೆ ಆಗುವುದರಲ್ಲಿದ್ದವು, ಆದರೆ ಸಿನಿಮಾ ಬಿಡುಗಡೆಗೆ ಮುನ್ನವೇ ಈಶ್ವರಿ ಕಾಲವಾಗಿದ್ದಾರೆ. ಅವರ ಮೊದಲ ಮರಾಠಿ ಸಿನಿಮಾ 'ಪ್ರೇಮಾಚೆ ಸೈಡ್ ಎಫೆಕ್ಟ್ಸ್' ನಲ್ಲಿ ಈಶ್ವರಿ ಜೊತೆ ನಟಿಸಿರುವ ನಟ ಅಭಿಯನ್ ಬೇರ್ಡೆ ಸಾಮಾಜಿಕ ಜಾಲತಾಣದಲ್ಲಿ ನಟಿ ಬಗ್ಗೆ ಒಳ್ಳೆಯ ಮಾತುಗಳನ್ನು ಬರೆದಿದ್ದು, ನಟಿಯ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm