ಬ್ರೇಕಿಂಗ್ ನ್ಯೂಸ್
18-10-21 12:46 pm Headline Karnataka News Network ಸಿನಿಮಾ
ಪಾಪಾ ಪಾಂಡು' ಸೇರಿ ಹಲವು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು (ಅಕ್ಟೋಬರ್ 18)ರ ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಪಾಪಾ ಪಾಂಡು' ಧಾರಾವಾಹಿಯಲ್ಲಿ ಬಾಸ್ ಪಾತ್ರ ನಿರ್ವಹಿಸಿದ್ದ ಶಂಕರ್ ರಾವ್, ರಮೇಶ್ ಅರವಿಂದ್ ನಿರ್ದೇಶನದ 'ಬಿಸಿ-ಬಿಸಿ' ಸಿನಿಮಾದ ಪಕ್ಕದ ಮನೆಯ ಅಂಕಲ್ ಪಾತ್ರದಿಂದಲೂ ಸಾಕಷ್ಟು ಖ್ಯಾತಿ ಗಳಿಸಿದ್ದರು. 'ಪರ್ವ', 'ಸಿಲ್ಲಿ-ಲಲ್ಲಿ' ಧಾರಾವಾಹಿಗಳಲ್ಲಿಯೂ ಅವರು ನಟಿಸಿದ್ದಾರೆ. ತುಮಕೂರಿನಲ್ಲಿ ಹುಟ್ಟಿ ಬೆಳೆದ ಶಂಕರ್ ರಾವ್ ಎಳವೆಯಿಂದಲೇ ಸಿನಿಮಾ ಪ್ರೇಮಿ. ಶಾಲಾ ದಿನಗಳಲ್ಲಿ ನಟನೆಯ ಬಗ್ಗೆ ಅಭಿರುಚಿ ಬೆಳೆಸಿಕೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಣ್ಣ ವಯಸ್ಸಿಗೆ ತಂದೆ ಕಳೆದುಕೊಂಡ ಶಂಕರ್ ರಾವ್ ಮನೆಯ ಜವಾಬ್ದಾರಿ ನಿಭಾಯಿಸುವ ಜೊತೆಗೆ ನಟನೆಯ ಹವ್ಯಾಸವನ್ನೂ ಮುಂದುವರೆಸಿದರು.
1956ರಲ್ಲಿ ಬೆಂಗಳೂರಿಗೆ ಬಂದ ಶಂಕರ್ ರಾವ್, 'ಗೆಳೆಯರ ಬಳಗ' ತಂಡ ಕಟ್ಟಿಕೊಂಡು ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. 'ನಟರಂಗ' ತಂಡದಲ್ಲಿಯೂ ಸಕ್ರಿಯರಾಗಿದ್ದರು. ಇವರ ಅಭಿನಯ ಚತುರತೆ ಗಮನಿಸಿ ನಿರ್ಮಾಪಕರೊಬ್ಬರು 'ಯಾರ ಸಾಕ್ಷಿ' ಸಿನಿಮಾದಲ್ಲಿ ಅವಕಾಶ ನೀಡಿದರು. ಅಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಶಂಕರ್ ರಾವ್ ನಟಿಸಿದರು.
Senior actor Shankar Rao, who has portrayed varied roles on the small and silver screens, has passed away in Bengaluru. He was 84. Sandalwood and the television industry have expressed grief over his death, with netizens taking to social media pages to express shock.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm