ಬ್ರೇಕಿಂಗ್ ನ್ಯೂಸ್
29-10-21 12:09 pm H K News Desk ಸಿನಿಮಾ
ಬೆಂಗಳೂರು, ಅ.29: ಕನ್ನಡದ ಹಿರಿಯ ನಟಿ ಲೀಲಾವತಿ(83) ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗುತ್ತಿದೆ. ವಯಸ್ಸಿನ ಕಾರಣದಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಲೀಲಾವತಿ ಅವರು ಇತ್ತೀಚೆಗೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಆನಂತರ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು.
ಲೀಲಾವತಿ ಅವರು ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯ ಮಗ ವಿನೋದ್ ರಾಜ್ ಜತೆ ವಾಸವಿದ್ದಾರೆ. ಕಳೆದ ಆಗಸ್ಟ್ ನಲ್ಲಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಆನಂತರ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದು ರೆಸ್ಟ್ ಅಗತ್ಯ ಇರುವ ಬಗ್ಗೆ ಸಲಹೆ ನೀಡಿದ್ದರು.
ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಲೀಲಾವತಿ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತಿದ್ದು ದ್ರವ ರೂಪದ ಆಹಾರವನ್ನು ಮಾತ್ರ ಸೇವಿಸುತ್ತಿದ್ದಾರೆನ್ನುವ ಮಾತುಗಳು ಕೇಳಿಬರುತ್ತಿವೆ. ಇದು ಅವರ ಅಪಾರ ಅಭಿಮಾನಿಗಳಿಗೆ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಹಲವು ನಟಿಯರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
1938 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಲೀಲಾಕಿರಣ್ ಹೆಸರಲ್ಲಿ ಜನಿಸಿದ್ದ ಲೀಲಾವತಿ 1950 ರಿಂದಲೇ ಚಿತ್ರರಂಗದಲ್ಲಿದ್ದಾರೆ. 1949ರಲ್ಲಿ ನಾಗಕನ್ನಿಕಾ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರಜೀವನ ಆರಂಭಿಸಿದ ಅವರು,ಕನ್ನಡ ತಮಿಳು ತೆಲುಗು ಹಾಗೂ ಮಲಯಾಳಂನ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 1999 ರಲ್ಲಿ ಚಿತ್ರರಂಗದಲ್ಲಿ ಜೀವಮಾನ ಸಾಧನೆಗಾಗಿ ನೀಡಲಾಗುವ ಡಾ.ರಾಜ್ ಕುಮಾರ್ ಪ್ರಶಸ್ತಿ ಪಡೆದಿರುವ ಲೀಲಾವತಿ, ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ.
Kannada actress Leelavathi condition serious admitted in Hospital.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:13 pm
Mangalore Correspondent
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
Mangalore, Suhas Shetty Murder, Anti Communia...
03-05-25 02:58 pm
Mangalore Suhas Shetty Murder, Instagram, Pol...
02-05-25 10:47 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm