ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್‌ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm