ಬ್ರೇಕಿಂಗ್ ನ್ಯೂಸ್
13-11-22 11:18 am Bangalore Correspondent ಡಾಕ್ಟರ್ಸ್ ನೋಟ್
ಬೆಂಗಳೂರು, ನ.13: ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಮಧುಮೇಹ ಪ್ರಕರಣಗಳು ಹೆಚ್ಚಾಗುತ್ತಿದೆ. ವಿಶೇಷವಾಗಿ, ಯುವ ಜನತೆಯಲ್ಲಿ ಮಧುಮೇಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಧುಮೇಹಿಗಳ ಪ್ರಮಾಣ ಗಮನಾರ್ಹ ಏರಿಕೆ ಕಂಡಿದೆ ಎಂದು ಹೆಲ್ತ್‌ಕೇರ್ ಅಧ್ಯಯನವೊಂದು ತಿಳಿಸಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಡಯಾಬಿಟಿಕ್ ಅಂದರೆ ಮಧುಮೇಹಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುವವರ ಸಂಖ್ಯೆ ಶೇ.44 ರಷ್ಟು ಹೆಚ್ಚಳವಾಗಿದೆ(ಅಕ್ಟೋಬರ್ 2020 ರಿಂದ ಸೆಪ್ಟಂಬರ್ 2021 ಕ್ಕೆ ಹೋಲಿಸಿದರೆ ಅಕ್ಟೋಬರ್ 2021 ರಿಂದ ಸೆಪ್ಟಂಬರ್ 2022 ರವರೆಗೆ). ಇದರಲ್ಲಿನ ಆಘಾತಕಾರಿ ಅಂಶವೆಂದರೆ 25 ರಿಂದ 34 ವಯೋಮಾನದ ಯುವ ಭಾರತೀಯರು ಡಯಾಬಿಟಿಕ್ ಗಾಗಿ ವೈದ್ಯರನ್ನು ಸಂಪರ್ಕಿಸುವ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವಯೋಮಾನದವರ ಸಂಖ್ಯೆ ಶೇ.46 ರಷ್ಟು ಹೆಚ್ಚಳವಾಗಿದೆ ಎಂದು ಪ್ರಾಕ್ಟೊ ನಡೆಸಿದ ಅಧ್ಯಯನ ತಿಳಿಸಿದೆ.
ಜೀವನಶೈಲಿ ಬದಲಾಯಿಸಿಕೊಳ್ಳಿ;
ಯುವ ಜನತೆಯಲ್ಲಿ ಮಧುಮೇಹ ಹೆಚ್ಚಾಗಲು ಹಲವು ಕಾರಣಗಳಿವೆ. ಪ್ರಮುಖ ಕಾರಣ ಕಳಪೆ ಜೀವನಶೈಲಿ ಆಯ್ಕೆಗಳು, ವ್ಯಾಯಾಮ ಮಾಡದೇ ಇರುವುದು ಅಥವಾ ಕಳಪೆ ಆಹಾರ ಪದ್ಧತಿಗಳು. ಇದರ ಪರಿಣಾಮ ಯುವ ಸಮುದಾಯದಲ್ಲಿ ಮಧುಮೇಹ ಹೆಚ್ಚಾಗಲು ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
``ಕಳೆದ 20 ವರ್ಷಗಳಲ್ಲಿ ಭಾರತದಲ್ಲಿ ಡಯಾಬಿಟಿಸ್ ನ ಹೊರೆ ದ್ವಿಗುಣವಾಗಿದೆ. ಹಾಲಿ ಇರುವ ಆರೋಗ್ಯ ರಕ್ಷಣೆಯ ಮೂಲಸೌಕರ್ಯವನ್ನು ಮೀರಿಸುವ ರೀತಿಯಲ್ಲಿ ಮಧುಮೇಹದ ಪ್ರಮಾಣ ಹೆಚ್ಚಳವಾಗಿದೆ. ಪ್ರತಿ 5 ಮಂದಿ ವಯಸ್ಕರರಲ್ಲಿ ಒಬ್ಬರಿಗೆ ಮಧುಮೇಹ ಇದೆ ಎಂದು ಅಂದಾಜು ಮಾಡಲಾಗಿದೆʼʼ ಎಂದು ಪ್ರಾಕ್ಟೊ ವೈದ್ಯಕೀಯ ಸಲಹೆಗಾರರು ಮತ್ತು ಯೂನಿವರ್ಸಿಟಿ ಹಾಸ್ಪಿಟಲ್ಸ್ ಬರ್ಮಿಂಗ್ ಹ್ಯಾಂ, ಎನ್ಎಚ್ಎಸ್ ನ ಕನ್ಸಲ್ಟೆಂಟ್ ಎಂಡೊಕ್ರಿನೋಲಾಜಿಸ್ಟ್ ಅಂಡ್ ಸೀನಿಯರ್ ಲೆಕ್ಚರರ್ ಡಾ.ಹೇಮಾ ವೆಂಕಟರಾಮನ್ ಹೇಳಿದ್ದಾರೆ.
"ದೇಶದಲ್ಲಿ ಮಧುಮೇಹದ ಕುರಿತು ಜಾಗೃತಿ ಹೆಚ್ಚಿಸಬೇಕಿದೆ. ಮಧುಮೇಹ ಆರೈಕೆ ವ್ಯವಸ್ಥೆಯ ಪೂರೈಕೆ ಬಗ್ಗೆ ಅವಲೋಕನ ಮಾಡಲು ಇದು ಸಕಾಲವಾಗಿದೆ. ಮಧುಮೇಹ ಉಪಶಮನದ ಪ್ರಗತಿಯ ಆವಿಷ್ಕಾರವು ಮಧುಮೇಹದ ಆರೈಕೆಯ ಮಾದರಿಯನ್ನು ಗ್ಲುಕೋಸೆಂಟ್ರಿಕ್ ಡ್ರಗ್ ಟ್ರೀಟ್ ಮೆಂಟ್ ಆಧಾರದಿಂದ ಮಧುಮೇಹದ ಮೂಲ ಕಾರಣವನ್ನು ಗುರಿಯಾಗಿಸುವ ಹೆಚ್ಚು ಸಮಗ್ರವಾದ ಮತ್ತು ದೊಡ್ಡ ಪ್ರಮಾಣದ ತಡೆಗಟ್ಟುವ ಉಪಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ. ದೇಶಾದ್ಯಂತ ಡಯಾಬಿಟಿಸ್ ಉಪಶಮನ ಕಾರ್ಯಕ್ರಮವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ಅಭಿಯಾನ ಮತ್ತು ಜಾಹೀರಾತು ಅಭಿಯಾನವನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ ಹಾಗೂ ಸಾರ್ವಜನಿಕರಲ್ಲಿ ಆರೋಗ್ಯಕರವಾದ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕಿದೆʼʼ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಧ್ಯಯನದ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ (ಅಕ್ಟೋಬರ್ 2020 ರಿಂದ ಸೆಪ್ಟೆಂಬರ್ 2021 ರವರೆಗೆ vs ಅಕ್ಟೋಬರ್ 2021 ರಿಂದ ಸೆಪ್ಟಂಬರ್ 2022 ರವರೆಗೆ ) ಈ ವರ್ಷ ಮಧುಮೇಹಕ್ಕೆ ಸಂಬಂಧಿಸಿದಂತೆ ವೈದ್ಯರನ್ನು ಸಂಪರ್ಕಿಸಿದವರ ಪ್ರಮಾಣ ಶೇಕಡ 46ರಷ್ಟು ಹೆಚ್ಚಾಗಿದೆ. ವೈದ್ಯರನ್ನು ಸಂಪರ್ಕಿಸಿದವರ ಪೈಕಿ 18-24 ರ ವಯೋಮಾನದವರು ಶೇ.5 ರಷ್ಟಿದ್ದರೆ, ಒಟ್ಟಾರೆ ಈ ವರ್ಗದಲ್ಲಿ ಶೇ.91 ರಷ್ಟು ಹೆಚ್ಚಳವಾಗಿದೆ. ವೈದ್ಯರನ್ನು ಸಂಪರ್ಕಿಸಿದವರ ಪೈಕಿ 35-44 ರ ವಯೋಮಾನದವರು ಶೇ.33 ರಷ್ಟಿದ್ದರೆ, ಒಟ್ಟಾರೆ ಈ ವರ್ಗದಲ್ಲಿ ಶೇ.23 ರಷ್ಟು ಹೆಚ್ಚಳವಾಗಿದೆ. ವೈದ್ಯರನ್ನು ಸಂಪರ್ಕಿಸಿದವರ ಪೈಕಿ 45-54 ರ ವಯೋಮಾನದವರು ಶೇ.8 ರಷ್ಟಿದ್ದರೆ, ಒಟ್ಟಾರೆ ಈ ವರ್ಗದಲ್ಲಿ ಶೇ.18 ರಷ್ಟು ಹೆಚ್ಚಳವಾಗಿದೆ. ವೈದ್ಯರನ್ನು ಸಂಪರ್ಕಿಸಿದವರ ಪೈಕಿ 54+ ರ ವಯೋಮಾನದವರು ಶೇ.4 ರಷ್ಟಿದ್ದರೆ, ಒಟ್ಟಾರೆ ಈ ವರ್ಗದಲ್ಲಿ ಶೇ.0.41 ರಷ್ಟು ಹೆಚ್ಚಳವಾಗಿದೆ ಎಂದು ಅಧ್ಯಯನ ವರದಿ ತಿಳಿಸಿದೆ.
ಮಧುಮೇಹ ನಿಯಂತ್ರಿಸುವುದು ಹೇಗೆ?
1. ನಿರಂತರ ಮತ್ತು ನಿಯಮಿತ ವ್ಯಾಯಾಮ ಮಧುಮೇಹ ನಿಯಂತ್ರಣಕ್ಕೆ ಅತೀ ಅಗತ್ಯ. ವ್ಯಾಯಾಮ ಮಾಡಿದಾಗ ಮಾಂಸಖಂಡಗಳು ಮತ್ತು ಸ್ನಾಯುಗಳು ಕ್ರಿಯಾಶೀಲವಾಗುತ್ತದೆ ಹಾಗೂ ಹೆಚ್ಚಿನ ಶಕ್ತಿಯ ಅಗತ್ಯವಿರುತ್ತದೆ. ಈ ಶಕ್ತಿಯು ರಕ್ತದಲ್ಲಿರುವ ಗ್ಲೂಕೋಸ್‍ನಿಂದ ಸ್ನಾಯುಗಳಿಗೆ ಸರಬರಾಜು ಆಗುತ್ತದೆ. ವ್ಯಾಯಾಮದಿಂದ ಜೀವಕೋಶಗಳು ಚಯಾಪಚಯ ಕ್ರಿಯೆಗಳು ವೇಗವಾಗುತ್ತದೆ. ಹಾಗಾದಾಗ ಹೆಚ್ಚಿನ ಕ್ಯಾಲರಿ (ಶಕ್ತಿ)ಯ ಅವಶ್ಯಕತೆ ಉಂಟಾಗಿ, ಗ್ಲೂಕೋಸ್‍ನಿಂದ ಶಕ್ತಿ ದೊರಕಿ, ರಕ್ತದಲ್ಲಿ ಗ್ಲೂಕೋಸ್ ಪ್ರಮಾಣ ನಿಯಂತ್ರಣದಲ್ಲಿರುತ್ತದೆ. ದಿನಕ್ಕರ್ಧ ಗಂಟೆಗಳ ವ್ಯಾಯಾಮ, ಬಿರುಸು ನಡಿಗೆ ಬರೀ ಮಧುಮೇಹ ರೋಗಕ್ಕೆ ಮಾತ್ರವಲ್ಲ, ಹೃದಯ ರೋಗ ಮತ್ತು ಅಧಿಕ ರಕ್ತದೊತ್ತಡದ ನಿಯಂತ್ರಣಕ್ಕೂ ಅತೀ ಅವಶ್ಯಕ.
2. ನೀವು ಸೇವಿಸುವ ಆಹಾರ ಯಾವತ್ತೂ ಕೊಬ್ಬು, ಪ್ರೊಟೀನ್ ಮತ್ತು ಪಿಷ್ಟಗಳಿಂದ ಕೂಡಿದ್ದು ಸಮತೋಲಿನ ಆಹಾರವಾಗಿರಬೇಕು. ಆಹಾರವು ಅನ್ನ ಸತ್ವಗಳು (ವಿಟಮಿನ್‍ಗಳು) ಮತ್ತು ಖನಿಜಗಳಿಂದ ಕೂಡಿರಬೇಕು. ಕೇವಲ ಶರ್ಕರ ಪಿಷ್ಟಗಳು ಹೆಚ್ಚಾಗಿರುವ ಆಹಾರ ಒಳ್ಳೆಯದಲ್ಲ. ನಿಮ್ಮ ಆಹಾರ ಸೊಪ್ಪು, ಹಸಿರು ತರಕಾರಿ, ಕಾಳು ಬೇಳೆಗಳಿಂದ ಕೂಡಿರಲಿ. ಸಂಸ್ಕರಿತ ಕೃತಕ ಆಹಾರ ಬೇಡವೇ ಬೇಡ. ಮೂಲಾಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ನೀವು ಸೇವಿಸುವ ಆಹಾರ ನಿಮ್ಮ ದೇಹದ ಗಾತ್ರ ಮತ್ತು ದೈಹಿಕ ಶ್ರಮಕ್ಕೆ ಅನುಗುಣವಾಗಿರಲಿ. ಆಹಾರ ಬರೀ ರುಚಿಗಾಗಿ ಇರದೆ, ದೇಹದ ಆರೋಗ್ಯಕ್ಕೆ ಪೂರಕವಾಗಿರಲಿ ನಾರುಯುಕ್ತ ಆಹಾರಕ್ಕೆ ಹೆಚ್ಚು ಆದ್ಯತೆ ನೀಡಿ. ಕೊಬ್ಬಿನಾಂಶ ಜಾಸ್ತಿ ಇರುವ ಕರಿದ ತಿಂಡಿಗಳು ಇರುವ ತಿನಿಸುಗಳಿಗೆ ಕಡಿವಾಣ ಹಾಕಬೇಕು.
3. ಮಾನಸಿಕ ಒತ್ತಡ ಕಡಿಮೆಯಾಗುವ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು. ಒತ್ತಡದ ಸಂದರ್ಭಗಳಲ್ಲಿ ರಸದೂತಗಳ ಸ್ರವಿಸುವಿಕೆ ಜಾಸ್ತಿಯಾಗಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಜಾಸ್ತಿಯಾಗಬಹುದು. ಬಿಡುವಿಲ್ಲದ ಒತ್ತಡದ ದೈಹಿಕ ವ್ಯಾಯಾಮವಿಲ್ಲದ ಜೀವನ ಶೈಲಿಯು ‘ಮಧುಮೇಹ’ ರೋಗಕ್ಕೆ ಮುನ್ನುಡಿ ಬರೆಯುತ್ತದೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ. ದೇಹಕ್ಕೆ ಮತ್ತು ಮನಸ್ಸಿಗೂ ಹಿತವಾದ ಸಂಗೀತ ಆಲಿಸುವುದು, ಯೋಗ, ಧ್ಯಾನ, ಪ್ರಾಣಯಾಮ ಇತ್ಯಾದಿಗಳಿಂದ ಮಾನಸಿಕ ಉದ್ವೇಗ, ತುಮುಲತೆಯನ್ನು ಕಡಿಮೆ ಮಾಡಿ ಮಾನಸಿಕ ನೆಮ್ಮದಿ, ಶಾಂತಿ ದೊರೆತಲ್ಲಿ ಮಧುಮೇಹ ಮಾತ್ರವಲ್ಲ ಇನ್ನೂ ಹತ್ತು ಹಲವು ಕಾಯಿಲೆಗಳನ್ನು ತಡೆಗಟ್ಟಬಹುದು.
4. ತಜ್ಞ ವೈದ್ಯರ ಸಲಹೆಯಂತೆ ಚಾಚುತಪ್ಪದೆ ಔಷಧಿಯನ್ನು ಸೇವಿಸಬೇಕು. ಔಷಧಿಗಳ ಪ್ರಮಾಣ ಮತ್ತು ಹೊತ್ತುಗಾರಿಕೆಯನ್ನು ವೈದ್ಯರು ನಿರ್ಧರಿಸುತ್ತಾರೆ. ಒಟ್ಟಿನಲ್ಲಿ ಚಿಕಿತ್ಸೆಯ ಉದ್ದೇಶ ರೋಗವನ್ನು ಗುಣಪಡಿಸುವುದು ಆಗಿರದೆ, ರೋಗವನ್ನು ನಿಯಂತ್ರಣದಲ್ಲಿಡುವುದಕ್ಕೆ ಹೆಚ್ಚಿನ ಆದ್ಯತೆ ಇರುತ್ತದೆ. ರಕ್ತದಲ್ಲಿನ ಸಕ್ಕರೆಯ ಅಂಶವನ್ನು ನಿಯಂತ್ರಿಸಿದಲ್ಲಿ ಬರಬಹುದಾದ ಎಲ್ಲಾ ಅಡ್ಡ ಪರಿಣಾಮಗಳನ್ನು ಮತ್ತು ಅಪಾಯವನ್ನು ತಡೆಗಟ್ಟಬಹುದು.
Diabetes cases are increasing year by year in the country. Especially, cases of diabetes are increasing among the young population. A healthcare study has said that the number of diabetics has increased significantly this year compared to last year.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm