ಬ್ರೇಕಿಂಗ್ ನ್ಯೂಸ್
22-04-22 09:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಮಾವಿನಕಾಯಿ ಹಾಗೂ ಮಾವಿನ ಹಣ್ಣಿನ ಸೀಸನ್ ಶುರುವಾಗಿ ಬಿಟ್ಟದೆ. ಮಾರ್ಕೆಟ್‌ಗಳಲ್ಲಿ, ತಳ್ಳುವ ಗಾಡಿಗಳಲ್ಲಿ, ಸೂಪರ್ ಮಾರ್ಕೆಟ್ ಗಳಲ್ಲಿ ಹೀಗೆ ಎಲ್ಲಿ ನೋಡಿದರೂ ಕೂಡ ಮಾವಿನ ಹಣ್ಣಿನದ್ದೇ ಕಾರುಬಾರು! ಸಾಮಾನ್ಯವಾಗಿ ಯುಗಾದಿ ಹಬ್ಬ ಕಳೆದ ಬಳಿಕ ಮಾವಿನ ಹಣ್ಣುಗಳು ಭರಾಟೆ ಎಲ್ಲಾ ಕಡೆ ಪ್ರಾರಂಭವಾಗುತ್ತದೆ.
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿ ಕಾಲಕಾಲಕ್ಕೆ ತಕ್ಕ ಹಾಗೆ ನಿಸರ್ಗದತ್ತವಾದ ಹಣ್ಣು ಮತ್ತು ತರಕಾರಿಗಳನ್ನು ನೀಡುತ್ತಾ ಬರುತ್ತಿದೆ. ಹೀಗಾಗಿ ಖುತುವಿಗೆ ಅನುಗುಣವಾಗಿ ಸಿಗುವ ಈ ಹಣ್ಣುಗಳನ್ನು ಮತ್ತು ತರಕಾರಿಗಳನ್ನು ಸೇವಿಸುತ್ತಾ ಬರುವುದರಿಂದ ನಮ್ಮ ಆರೋಗ್ಯವನ್ನು ಸದೃಢತೆಯನ್ನು ಕಾಯ್ದುಕೊಳ್ಳಲು ನೆರವಾಗುವುದು. ಬನ್ನಿ ಇಂದಿನ ಲೇಖನದಲ್ಲಿ ಮಾವಿನಕಾಯಿ ಮತ್ತು ಮಾವಿನ ಹಣ್ಣುಗಳಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳನ್ನ ನಿರೀಕ್ಷಿಸಬಹುದು ಎಂಬುದನ್ನು ನೊಡೋಣ...
ಮಧುಮೇಹ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾದರೆ ಹಾರ್ಟ್‌ಗೆ ತೊಂದರೆ ಎನ್ನುವ ಸಂಗತಿ ನಮ ಗೆಲ್ಲಾ ಗೊತ್ತೇ ಇದೆ ಅಲ್ವಾ? ಹಾಗಾಗಿ ಆರೋಗ್ಯಕಾರಿ ಆಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ಈ ಸಮಸ್ಯೆಯಿಂದ ಪಾರಾಗ ಬಹುದು. ಹೀಗಾಗಿ ಹಲವಾರು ಪೌಷ್ಟಿಕ ಸತ್ವಗಳನ್ನು ಹೊಂದಿರುವ ಮಾವಿನ ಹಣ್ಣನ್ನು ಮಿತವಾಗಿ ಸೇವಿಸುವುದ ರಿಂದ, ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶಗಳು ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ!
ದೇಹದ ತೂಕ ಇಳಿಸಲು
ಕಣ್ಣುಗಳ ಅರೋಗ್ಯಕ್ಕೆ ಒಳ್ಳೆಯದು
ಕಣ್ಣುಗಳು ನಮ್ಮ ದೇಹದ ಪ್ರಮುಖ ಅಂಗ. ಹೀಗಾಗಿ ಇವುಗಳ ಆರೋಗ್ಯವನ್ನು ಕಾಪಾಡಿಕೊಳ್ಳ ಬೇಕು ಎಂದರೆ ಸರಿಯಾದ ಆಹಾರಕ್ರಮ ಹಾಗೂ ಮಿತವಾಗಿ ಮಾವಿನಹಣ್ಣನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಬೇಕು. ಮುಖ್ಯ ವಾಗಿ ಕಣ್ಣಿನ ಆರೋಗ್ಯವನ್ನು ಕಾಪಾಡುವ ವಿಟಮಿನ್ ಎ ಹೇರಳವಾಗಿ ಕಂಡುಬರುವುದರಿಂದ ಇದು ಕಣ್ಣಿನ ದೃಷ್ಟಿಯನ್ನು ಸುಧಾರಿಸಲು ನೆರವಾಗುವ ಪರಿಪೂರ್ಣ ಹಣ್ಣು ಎಂದರೆ ತಪ್ಪಾಗಲಾರದು! ಅಷ್ಟೇ ಅಲ್ಲದೇ ಕೆಲವರಲ್ಲಿ ಕಂಡು ಬರುವ ರಾತ್ರಿ ಕುರುಡುತನ ಮತ್ತು ಕಣ್ಣುಗಳನ್ನು ಒಣಗಿಸುವಿಕೆ ಸಮಸ್ಯೆಯನ್ನು ಕೂಡ ತಡೆಯುತ್ತದೆ.
ಮೊಡವೆಗಳ ಸಮಸ್ಯೆ ಇದ್ದರೆ
ಹದಿಹರೆಯಕ್ಕೆ ಕಾಲಿಡುತ್ತಿದ್ದಂತೆ ಮೊಡವೆಗಳ ಸಮಸ್ಯೆ ಎಲ್ಲರಲ್ಲಿಯೂ ಕಂಡು ಬರುತ್ತದೆ. ಆದರೆ ಇದಕ್ಕೆಲ್ಲಾ ದುಬಾರಿ ಹಣ್ಣ ಕೊಟ್ಟು ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಯುಕ್ತ ಕ್ರೀಮ್, ಬಳಸುವ ಬದಲು ಹಸಿ ಮಾವಿನಕಾಯಿ ಗಳನ್ನು ಬಳಸಿ ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು!
ಹೀಗೆ ಮಾಡಿ...
ಒಂದು ವೇಳೆ ಮುಖ ಮೇಲೆ ಅತಿಯಾದ ಮೊಡವೆ ಸಮಸ್ಯೆಗಳು ಮತ್ತು ಇದರಿಂದ ಮೂಡುವ ಕಲೆಗಳು ಉಂಟಾ ದರೆ, ಸಣ್ಣ ಹಸಿ ಮಾವಿನಕಾಯಿಯನ್ನು ಸಣ್ಣದಾಗಿ ಕಟ್ ಮಾಡಿ, ನೀರಿನಲ್ಲಿ ಚೆನ್ನಾಗಿ ಕುದಿಸಿ ಅದನ್ನು ಮುಖದ ಮೇಲೆ ದಿನಾ ರಾತ್ರಿ ಮಲಗುವ ಮುನ್ನ ಹಚ್ಚಿ. ಉತ್ತಮ ಫಲಿತಾಂಶಕ್ಕಾಗಿ ಪ್ರತಿದಿನ ಹೀಗೆ ಅನುಸರಿಸುವುದರಿಂದ ಒಳ್ಳೆಯ ಫಲಿತಾಂಶವನ್ನು ನಿರೀಕ್ಷಿಸಬಹುದು.
Know The Health Benefits Of Eating One Piece Of Mango Before Sleep.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 01:01 pm
Mangalore Correspondent
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm