ಬ್ರೇಕಿಂಗ್ ನ್ಯೂಸ್
16-08-20 05:05 pm Headline Karnataka News Network ಲೀಡರ್ಸ್ ರಿಪೋರ್ಟ್
ಮಂಗಳೂರು, ಆಗಸ್ಟ್ 16: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಹಲವಾರು ಭರವಸೆಗಳನ್ನು ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಮಂಗಳೂರಿನ ಅಭಿವೃದ್ಧಿಗೆ ಪೂರಕವಾಗಿ ಟಿ.ಡಿ.ಆರ್ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯುವ ಕುರಿತು ಭರವಸೆ ನೀಡಿದ್ದೆವು. ಆ ಪ್ರಕಾರ ಅಭಿವೃದ್ಧಿ ಕಾಮಗಾರಿ ಸಂಬಂಧಿಸಿ ಖಾಸಗಿ ಜಮೀನಿನ ಅಗತ್ಯ ಇರುವುದರಿಂದ, ಭೂಸ್ವಾಧೀನಕ್ಕೆ ವೇಗ ನೀಡಲು ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಉಪ ಕರವನ್ನು ಹಾಗೂ ಉದ್ದಿಮೆಗಳ ಮೇಲೆ ವಿಧಿಸಿರುವ ಘನತ್ಯಾಜ್ಯ ವಿಲೇವಾರಿ ಸೇವಾಶುಲ್ಕವನ್ನು ಪರಿಷ್ಕರಿಸುವ ಮೂಲಕ ಜನರಿಗೆ ಚುನಾವಣೆಯ ವೇಳೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳಲಾಗಿದೆ. ಆಡಳಿತ ವ್ಯವಸ್ಥೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ಎಲ್ಲ ವಾರ್ಡುಗಳಲ್ಲಿಯೂ ವಾರ್ಡ್ ಸಮಿತಿ ರಚಿಸಲು ನಿರ್ಣಯ ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿ ಕಣ್ಣೂರು ಗ್ರಾಮದಲ್ಲಿ ಜಿ+3 ಮಾದರಿಯ 500 ಮನೆಗಳ ನಿರ್ಮಾಣ ಯೋಜನೆಗೆ ಪಾಲಿಕೆಯಿಂದ ಶೇ.10 ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. 6 ಗುಂಪುಗಳ ಜಿ+3 ಮಾದರಿಯ 21 ಬ್ಲಾಕ್ ಗಳನ್ನೊಳಗೊಂಡ ಲೇಔಟ್ ಯೋಜನೆ ಮಾಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಯಂತೆ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ದರ ಕಡಿಮೆಗೊಳಿಸಲಾಗಿದೆ. ಗೃಹೇತರ, ವಾಣಿಜ್ಯ, ಕಟ್ಟಡ ರಚನೆ, ಸಗಟು ಪೂರೈಕೆ, ಬೃಹತ್ ಕೈಗಾರಿಕೆ ಹಾಗೂ ಗೃಹ ಬಳಕೆ ನೀರಿನ ದರವನ್ನು ಪರಿಷ್ಕರಿಸಲಾಗಿದೆ. ಆ ಮೂಲಕ ಮಂಗಳೂರಿನ ಜನತೆಗೆ ನಾವು ನೀಡಿದ್ದ ಭರವಸೆಯನ್ನು ನಮ್ಮ ಆಡಳಿತದ ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಪದವು ಗ್ರಾಮದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಹಾಗೂ ರಾಜ್ಯ ಸರ್ಕಾರದ ಅನುದಾನದಡಿ ಮಂಜೂರಾತಿ ಪಡೆದಿರುವ ಜಿ+3 ಮಾದರಿಯ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಉಂಟಾಗಿದ್ದ ಸಂರಕ್ಷಿತ ಅರಣ್ಯದ ತೊಡಕನ್ನು ನಿವಾರಿಸಲಾಗಿದೆ. ಅರಣ್ಯ ಇಲಾಖೆಗೆ ಪ್ರತ್ಯೇಕ ಜಮೀನು ನೀಡಲಾಗಿದ್ದು, ಈ ಹಿಂದೆ ಗುರುತಿಸಿದ ಸ್ಥಳದಲ್ಲೇ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 12:07 pm
HK News Desk
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm