ಬ್ರೇಕಿಂಗ್ ನ್ಯೂಸ್
06-09-20 05:52 pm Udupi Reporter ಲೀಡರ್ಸ್ ರಿಪೋರ್ಟ್
ಉಡುಪಿ, ಸೆಪ್ಟೆಂಬರ್ 6: ದೇಶದಲ್ಲಿ ಕಡಲ ಮೀನುಗಾರಿಕೆಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಒಳನಾಡು ಮೀನು ಉತ್ಪಾದನೆಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನು ಮೂರು ವರ್ಷದಲ್ಲಿ ದೇಶದಲ್ಲಿ ಕರ್ನಾಟಕ ರಾಜ್ಯ ಮೀನು ಉತ್ಪಾದನೆಯಲ್ಲಿ ಪ್ರಥಮ ಸ್ಥಾನ ತಲುಪುವ ಅವಕಾಶ ನಿಚ್ಚಳವಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಗಂಗೊಳ್ಳಿ, ಮರವಂತೆ, ಕೊಡೇರಿ ಮೀನುಗಾರಿಕಾ ಜಟ್ಟಿ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೀನುಗಾರಿಕೆಗೆ ನೀಡುತ್ತಿರುವ ಸಹಕಾರ ಹಾಗೂ ಉತ್ತೇಜನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗಂಗೊಳ್ಳಿ ಮೀನುಗಾರಿಕಾ ಜಟ್ಟಿ ಕಾಮಗಾರಿ ವೀಕ್ಷಿಸಿದ ಸಚಿವರು 12 ಕೋಟಿ ರುಪಾಯಿ ಮೊತ್ತದಲ್ಲಿ ಹೊಸದಾಗಿ ಜಟ್ಟಿ ನಿರ್ಮಾಣವಾಗಲಿದ್ದು, ಇದರಿಂದ ಗಂಗೊಳ್ಳಿ ಪ್ರದೇಶದ ಮೀನುಗಾರಿಕೆಗೆ ಹೊಸ ಕಾಯಕಲ್ಪ ಸಿಗಲಿದೆ ಎಂದು ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಜಟ್ಟಿ ಪ್ರದೇಶದಲ್ಲಿ ಹೈಮಾಸ್ಟ್ ದೀಪದ ಅಳವಡಿಕೆ, ತುರ್ತಾಗಿ ಹೂಳೆತ್ತುವುದು ಸೇರಿದಂತೆ ಹಲವಾರು ಬೇಡಿಕೆಗೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿ, ತಕ್ಷಣ ಸಮಸ್ಯೆ ಬಗೆಹರಿಸಲು ತಿಳಿಸಿದರು.
ಮರವಂತೆ ಬ್ರೇಕ್ ವಾಟರ್ ನಿರ್ಮಾಣವಾಗುತ್ತಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು, ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ. ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮೀನುಗಾರರ ಪರವಾಗಿ ಕೃತಜ್ಞತೆ ತಿಳಿಸಿದರು. ಎರಡನೇ ಹಂತದ ಕಾಮಗಾರಿಯ ಯೋಜನಾ ವರದಿ ಸಿದ್ಧವಾಗಿ, ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆಗಳು ಮುಗಿದು, ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮೀನುಗಾರರಿಗೆ ಭರವಸೆ ನೀಡಿದರು.
ಕೊಡೇರಿ ಮೀನುಗಾರಿಕಾ ಜೆಟ್ಟಿ ಮತ್ತು ಉಪ್ಪುಂದ ನಾಡದೋಣಿ ತಂಗುದಾಣದ ಕಿರು ಜಟ್ಟಿಗಳ ವಿಸ್ತರಣೆ ಮಾಡಿ ಮೂಲಭೂತ ಸೌಕರ್ಯ, ವಿದ್ಯುತ್ ದೀಪ, ಕೊಂಡಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು. ಇದಕ್ಕೆ ಪೂರಕವಾಗಿ 4.5 ಕೋಟಿ ರುಪಾಯಿ ಪ್ರಸ್ತಾವನೆ ಹಣಕಾಸು ಇಲಾಖೆಯಲ್ಲಿ ಇದ್ದು, ವಾರಾಂತ್ಯದಲ್ಲಿ ಮಂಜೂರಾತಿ ಪಡೆದು ಮೀನುಗಾರರಿಗೆ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.
ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಭೇಟಿ ನೀಡಿದ ಸಚಿವರಿಗೆ, ಮೀನು ವ್ಯಾಪಾರಿ ಮಹಿಳೆಯರು ವೃತ್ತಿ ಮಾಡಲು ಜಾಗದ ಸಮಸ್ಯೆಗಳಿದ್ದು, ಪರಿಹಾರ ಕೊಡಿಸಬೇಕೆಂದು ವಿನಂತಿಸಿದರು.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 12:07 pm
HK News Desk
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm