ಬ್ರೇಕಿಂಗ್ ನ್ಯೂಸ್
10-09-20 05:45 pm Mysore Correspondent ಲೀಡರ್ಸ್ ರಿಪೋರ್ಟ್
ಮೈಸೂರು, ಸೆಪ್ಟೆಂಬರ್ 10: ಮೈಸೂರು ರಾಜಕಾರಣಿಗಳೇ ಡಗ್ಸ್ ಮಾಫಿಯಾದ ರೂವಾರಿಗಳಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಡ್ರಗ್ಸ್ ದೊರೆಯುತ್ತದೆ ಎಂದು ಆರೋಪ ಮಾಡಿದರು.
ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಅವರ ಮಕ್ಕಳೇ ಇದರಲ್ಲಿ ಶಾಮೀಲು ಆಗಿದ್ದಾರೆ. ಸಾವಿರಾರು ಕೋಟಿ ದಂಧೆ ಮಾಡುತ್ತಿದ್ದು, ಪ್ರಕರಣ ಹೊರ ಬಂದಾಗ ಜಾಮೀನು ಪಡೆದು ಹೊರಗೆ ಬರುತ್ತಾರೆ. ಬಳಿಕ ಇದೇ ರೀತಿ ಮತ್ತೇ ಡ್ರಗ್ಸ್ ದಂಧೆ ಮಾಡುತ್ತಾರೆ. ಈ ಡ್ರಗ್ಸ್ ಮಾಫಿಯಾ ಬಗ್ಗೆ ಪೊಲೀಸರಿಗೆ ಎಲ್ಲಾ ತಿಳಿದಿದ್ದರೂ, ರಾಜಕಾರಣಿಗಳೇ ಪೊಲೀಸರ ಕೈಕಟ್ಟಿ ಹಾಕಿದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಲವ್ ಜಿಹಾದ್ ಮಾದರಿಯಲ್ಲಿ ಡ್ರಗ್ಸ್ ಜಿಹಾದ್ ನಡೆಯುತ್ತಿದ್ದು, ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ ಆಗಿದ್ದು, ಪಂಜಾಬ್, ಗುಜರಾತ್, ಗೋವಾ ಮೂಲಕ ಭಾರತಕ್ಕೆ ಡ್ರಗ್ಸ್ ಪ್ರವೇಶಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೇ, ಇಂದು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದರು.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm