ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
26-12-25 01:35 pm
HK News Desk
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
26-12-25 03:04 pm
HK News Desk
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
26-12-25 03:31 pm
HK News Desk
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm